ದಾವಣಗೆರೆ:-ಮಚ್ಚಿನಿಂದ ಹೊಡೆದು ಓರ್ವ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಪೆಟ್ರೋಲ್ ಬಂಕ್ ಬಳಿ ತಡರಾತ್ರಿ ಜರುಗಿದೆ.
Advertisement
ಸಂತೋಷ (32) ಕೊಲೆಯಾದ ಯುವಕ ಎನ್ನಲಾಗಿದೆ.
ಅನೈತಿಕ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಮೂವರು ಯುವಕರು ಸೇರಿ ಸಂತೋಷ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ತೀವ್ರ ರಕ್ತಸ್ರಾವವಾಗಿ ಸಂತೋಷ್ ಸಾವನ್ನಪ್ಪಿದ್ದಾನೆ.
ಘಟನೆ ಬಳಿಕ ಆರೋಪಿಗಳು ನಾಪತ್ತೆ ಆಗಿದ್ದು, ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ಯುವಕ ಗಾರೆ ಕೆಲ್ಸಾ ಮಾಡುತ್ತಿದ್ದ ಎನ್ನಲಾಗಿದೆ. ಸಂತೆಬೆನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.