ಚಿಕ್ಕಬಳ್ಳಾಪುರ:- ಜೆಡಿಎಸ್ ಮುಖಂಡ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಇಂದು ಅರೆಸ್ಟ್ ಮಾಡಿದ್ದಾರೆ.
ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಬಂಧಿತರು. ಹಳೆಯ ದ್ವೇಷ ಹಿನ್ನಲೆ ಹತ್ಯೆ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ವೆಂಕಟೇಶ್ ತೆರಳುತ್ತಿದ್ದ ಸ್ಕೂಟಿಯನ್ನು ಅಡ್ಡಗಟ್ಟಿದ್ದ ಧನರಾಜ್ ಹಾಗೂ ಸತೀಶ್ ಮೊದಲು ಹಂದಿ ಕೊಯ್ಯುವ ಚಾಕುವಿನಿಂದ ಬೆನ್ನಿಗೆ ಇರಿದಿದ್ದರು. ನಂತರ ಹೊಟ್ಟೆ, ಮುಖಕ್ಕೆ ಮೂರು ಬಾರಿ ಹೊಡೆದಿದ್ದರು. ಅಲ್ಲದೇ ಕೈ ಕಟ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು. ಬಳಿಕ ಆರೋಪಿಗಳು ಬೆಂಗಳೂರಿನಲ್ಲಿ ರೂಮ್ ಮಾಡಿಕೊಂಡಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಹಿನ್ನೆಲೆ:-
ಲೋಕಸಭಾ ಚುನಾವಣೆಯಲ್ಲಿ ಅರವಿಂದ್ ಎಂಬವರಿಗೆ ಹಣ ನೀಡಲಿಲ್ಲ ಎಂದು ಬಾರ್ ಒಂದರಲ್ಲಿ ಮೃತ ವೆಂಕಟೇಶ್ ಹಾಗೂ ಧನರಾದ್ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಧನುಗೆ ವೆಂಕಟೇಶ್ ಹಿಗ್ಗಾ ಮುಗ್ಗಾ ಹೊಡೆದಿದ್ದ ಎನ್ನಲಾಗಿದೆ.
ನಂತರ ಧನು ಪರವಾಗಿ ರಾಜೀ ಮಾಡಲು ಮುಂದಾಗಿದ್ದ ಸತೀಶ್‍ಗೂ ವೆಂಕಟೇಶ್ ಹೊಡೆದು ಕಳಿಸಿದ್ದು, ಇದಾದ ಬಳಿಕ ಧನು, ಸತೀಶ್ ಎಲ್ಲಿ ಸಿಕ್ಕರೂ ವೆಂಕಟೇಶ್ ವಾರ್ನಿಂಗ್ ಕೊಡಲು ಶುರು ಮಾಡಿದ್ದು, ದೂರು ಕೊಟ್ಟರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಆವಾಜ್ ಹಾಕುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಇದೇ ವಿಚಾರಕ್ಕೆ ವೆಂಕಟೇಶ್‍ನನ್ನು ಆರೋಪಿಗಳು ಜ.3ರ ರಾತ್ರಿ ಹತ್ಯೆ ಮಾಡಿದ್ದರು.