ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ಹೊರಗೆ ಬರ್ತಾರೆ: ಸುಳಿವು ಕೊಟ್ಟ ಸೂರಜ್‌ ರೇವಣ್ಣ!

0
Spread the love

ಹಾಸನ:- ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ಹೊರಗೆ ಬರ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸುಳಿವು ಕೊಟ್ಟಿದ್ದಾರೆ.

Advertisement

ಹೊಳೆನರಸೀಪುರದ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜ್ವಲ್‌ ರೇವಣ್ಣ ಈ ಗ್ರಾಮಕ್ಕೆ ಕೊಡುಗೆ ಕೊಟ್ಟಿದ್ದಾರೆ. ಅವರು ಶೀಘ್ರದಲ್ಲೇ ಬಿಡುಗಡೆಯಾಗುತ್ತಾರೆ. ನಾವು, ನೀವು ಎಲ್ಲರೂ ಒಟ್ಟಿಗೆ ಸ್ವಾಗತ ಮಾಡೋಣ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ. ಮುಂದಕ್ಕೂ ರಾಜಕೀಯ ಏನು ಅನ್ನೋದು ನನಗೂ ಗೊತ್ತಿದೆ ಎಂದಿದ್ದಾರೆ.

ದಿನ ನಿತ್ಯ ನಾವು ನಿಮ್ಮ ಜೊತೆ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತೇವೆ. ರೇವಣ್ಣ ಅವರು ಎಲ್ಲಾ ಹಳ್ಳಿಗಳಿಗೂ ರಸ್ತೆಗಳನ್ನು ಮಾಡಿದ್ರು. ಈಗಿನವರು ಎಲ್ಲಾ ಹಳ್ಳಿಗಳಲ್ಲೂ ದೇವಾಲಯ ನಿರ್ಮಾಣ ಮಾಡ್ತಿದ್ದಾರೆ. ನಮ್ಮ ಗ್ರಾಮಕ್ಕೆ ಯಾರು ಹಿತ, ಯಾರು ಅಹಿತ ಎಂದು ಯೋಚನೆ ಮಾಡಬೇಕು. ಶಾಶ್ವತವಾಗಿ ನಿಮ್ಮ ಗ್ರಾಮದ ಕೆಲಸ ಮಾಡಿದವರನ್ನು ಏಕೆ ನೆನಪಿಸಿಕೊಳ್ಳುತ್ತಿಲ್ಲ ಎಂದು ಬೇಸರ ಹೊರಹಾಕಿದರು.


Spread the love

LEAVE A REPLY

Please enter your comment!
Please enter your name here