BREAKING NEWS: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ!

0
Spread the love

ಬೆಂಗಳೂರು: ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಉಚ್ಛಾಟನೆ  ಮಾಡಲಾಗಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಹೈಕಮಾಂಡ್‌ ನಿರ್ಧಾರವನ್ನು ಕೈಗೊಂಡಿದೆ.

Advertisement

ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆ.10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಈ ನಿರ್ಧಾರ ಇಂದು ಕೈಗೊಂಡಿದೆ.

ಉಚ್ಛಾಟನೆ ಆದೇಶದಲ್ಲೇನಿದೆ?

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ.

ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.


Spread the love

LEAVE A REPLY

Please enter your comment!
Please enter your name here