ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಕಳಸಾಪೂರ ಗ್ರಾಮ ಪಂಚಾಯಿತಿಯಲ್ಲಿ ವಿಶ್ವಗುರು ಬಸವಣ್ಣನವರ ಮತ್ತು ಹೇಮರಡ್ಡಿ ಮಲ್ಲಮ್ಮರವರ ಜಯಂತಿಯನ್ನು ಆಚರಿಸಲಾಯಿತು.
Advertisement
ವಿಶೇಷ ಆಹ್ವಾನಿತರಾದ ಕಳಸಾಪೂರ ಬಸವಕೇಂದ್ರದ ಕಾರ್ಯಧ್ಯಕ್ಷ ಮಲ್ಲಿಕಾರ್ಜುನ ಖಂಡಮ್ಮನವರ ಮಾತನಾಡಿ, 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವ ಜನಾಂಗದ ಅನುಭವ ಮಂಟಪ ಸ್ಥಾಪಿಸಿದ ಮಹಾನ್‌ವ್ಯಕ್ತಿಯಾಗಿದ್ದಾರೆ. ಅವರ ವಚನಗಳು ಇಂದಿನ ಕಾಲಕ್ಕೂ ಅತ್ಯಂತ ಪ್ರಸ್ತುತವಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಗುರು-ಹಿರಿಯರು ಪಾಲ್ಗೊಂಡಿದ್ದರು. ಅಭಿವೃದ್ಧಿ ಅಧಿಕಾರಿ ಕೊಟ್ರೇಶ ಓಲಿ ಸ್ವಾಗತಿಸಿ ನಿರೂಪಿಸಿದರು. ಮತ್ತು ನಿರೂಪಣೆಯನ್ನು ಮಾಡಿದರು ಎಂದು ಸದಸ್ಯ ಕಿರಣ ಕೋರ್ಪಡೆ ತಿಳಿಸಿದ್ದಾರೆ.