ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬಸವರಾಜ್ ಬೊಮ್ಮಾಯಿ: ಅಂತದ್ದೇನಾಯ್ತು!?

0
A pro-development budget by a developed India
Spread the love

ಬೆಂಗಳೂರು:- ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.

Advertisement

ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅಲ್ಲದೇ ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ‌ ಕೋರ್ಟ್, ಬುಧವಾರ ಆದೇಶ ಪ್ರಕಟಿಸಲಿದೆ. ಆದ್ರೆ, ಬಸವರಾಜ ಬೊಮ್ಮಾಯಿ ಅವರು ಏಕೆ ನಿರ್ಬಂಧಕಾಜ್ಞೆ ತರಲು ಹೊರಟ್ಟಿದ್ದಾರೆ ಎನ್ನುವುದು ಅಚ್ಚರಿ ಮೂಡಿಸಿದೆ.

ಓರ್ವ ವ್ಯಕ್ತಿಯ ಚಾರಿತ್ರ್ಯ ವಧೆ, ಮಾನಹಾನಿಯಾಗುವಂತೆ ಯಾರಾದರು ಹೇಳಿಕೆ, ದಾಖಲೆಗಳನ್ನು ಬಿಡುಗಡೆ ಮಾಡುತ್ತಾರೆ. ಅದನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತರುವುದು ಮಾಮೂಲಿಯಾಗಿದೆ. ಆದ್ರೆ, ಇದೀಗ ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರು ಏಕಾಎಕಿ ಯಾಕೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತರಲು ಹೊರಟಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.


Spread the love

LEAVE A REPLY

Please enter your comment!
Please enter your name here