ಬೆಂಗಳೂರು:- ಸಭಾಪತಿ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ಕೊಟ್ಟಿದ್ದಾರೆ ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವೈರಲ್ ಪತ್ರದ ಬಗ್ಗೆ ಸಭಾಪತಿ ಬಸವರಾಜ್ ಹೊರಟ್ಟಿ ಇದೀಗ ಸ್ಪಷ್ಟನೆ ಕೊಟ್ಟಿದ್ದಾರೆ.
ರಾಜೀನಾಮೆ ಕೊಡಬೇಕು ಎಂಬ ನಿರ್ಧಾರ ಮಾಡಿದ್ದು ನಿಜ. ಆದರೆ ಇದೀಗ ಬಹಳ ಜನ ನನಗೆ ಕಾಲ್ ಮಾಡಿ ಬೇಡ ಅನ್ನುತ್ತಿದ್ದಾರೆ. ಸಹಿ ಮಾಡಿದ ಪತ್ರ ಇನ್ನೂ ಲಾಕರ್‌ನಲ್ಲಿದೆ. ವೈರಲ್ ಆಗಿರುವುದು ಸಹಿ ಮಾಡದ ಪತ್ರ. ನನ್ನ ಪಿ.ಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ದಿನಾಂಕ 21 ಎಂದು ಹಾಕಿದ್ದೆ. ಈ ಪತ್ರ ಬಹಳ ಜನರ ಹತ್ತಿರ ಹೋಗಿದೆ. ಸಚಿವರು, ಪರಿಷತ್ ಸದಸ್ಯರು ಕಾಲ್ ಮಾಡುತ್ತಿದ್ದಾರೆ. ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ ಎಂದರು.
ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ನಾನು ರಾಜೀನಾಮೆ ಕೊಡುವ ನಿರ್ಧಾರ ಮಾಡಿದ್ದೆ. ಕೆಲವರ ನಡುವಳಿಕೆ ನನ್ನ ಮನಸಿಗೆ ಸಮಾಧಾನವಾಗಿಲ್ಲ. ಕಳೆದ ಮೂರು ವರ್ಷಗಳಿಂದ ಅಸಮಾಧಾನವಾಗಿದೆ. ರಾಜ್ಯದ ಎಲ್ಲಾ ಕಡೆಯಿಂದ ಕರೆ ಬಂದಿದೆ, ಮಾನಸಿಕ ನೆಮ್ಮದಿ ಹಾಳಾಗಿದೆ. ನಾಳೆ ಒಂದು ದಿನ ಕುಳಿತು ವಿಚಾರ ಮಾಡುತ್ತೇನೆ. ಆತ್ಮೀಯರ ಮಾತು ಕೇಳಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು.