ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ದಿಢೀರ್ ರಾಜಿನಾಮೆ!

0
Spread the love

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ಕಾಂಗ್ರೆಸ್​​ನಲ್ಲಿ ಹಲ್​ ಚಲ್ ಎಬ್ಬಿಸಿದ್ದು, ಈ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಎನ್​​ ರಾಜಣ್ಣ ಪುತ್ರ, ಎಂಎಲ್​​ಸಿ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಸಾಕ್ಷ್ಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

Advertisement

ಇನ್ನೊಂದೆಡೆ ಬಸವರಾಜ್‌ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹಾಗಾಗಿ, ನಾನು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಇಂದು  ಬೆಳಗ್ಗೆ ಅಷ್ಟೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗಾಗಲೇ ಅವರು ರಾಜೀನಾಮೆ ಪತ್ರವನ್ನು ಉಪಸಭಾಪತಿಗೆ ರವಾನಿಸಿರುವುದು ಬೆಳಕಿಗೆ ಬಂದಿದೆ.


Spread the love

LEAVE A REPLY

Please enter your comment!
Please enter your name here