ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿಯ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಏ.19ರಂದು ಬೆಳಿಗ್ಗೆ 11 ಗಂಟೆಗೆ ಹಾವೇರಿ ನಗರದ ಐತಿಹಾಸಿಕ ಹುಕ್ಕೇರಿ ಮಠದಿಂದ ಜೆಪಿ ಸರ್ಕಲ್‌ವರೆಗೆ ಬೃಹತ್ ಮೆರವಣಿಗೆಯ ಮೂಲಕ ತೆರಳಿ ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕರಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ಮಾಜಿ ಸಚಿವ ಕಳಕಪ್ಪ ಬಂಡಿ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ಯುವ ನಾಯಕ ಅನಿಲ ಮೆಣಸಿನಕಾಯಿ ಸೇರಿದಂತೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.
ಗದಗ ಜಿಲ್ಲೆಯಿಂದ ಪಕ್ಷದ ಕಾರ್ಯಕರ್ತರು, ಹಿರಿಯರು, ಹಿತೈಷಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧ್ಯಕ್ಷ ರಾಜು ಕುರಡಗಿ, ವಕ್ತಾರರಾದ ಎಂ.ಎಂ. ಹಿರೇಮಠ ವಿನಂತಿಸಿದ್ದಾರೆ.