ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಸಂಸದರಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಆಯ್ಕೆಯಾದ ಸಂತಸವನ್ನ ಹಂಚಿಕೊಂಡರು.
Advertisement
ಈ ಸಂದರ್ಭದಲ್ಲಿ ಬಸವರಾಜ ಹೊರಟ್ಟಿಯವರು ಬೊಮ್ಮಾಯಿ ಅವರನ್ನು ಸನ್ಮಾನಿಸಿ ಶುಭ ಕೋರಿ, ಮುಖ್ಯಮಂತ್ರಿಗಳಾಗಿ ಸಾಕಷ್ಟು ಜನಪರ ಕೆಲಸ ಮಾಡುವ ಮೂಲಕ `ಕಾಮನ್ ಮ್ಯಾನ್’ ಮುಖ್ಯಮಂತ್ರಿಗಳೆಂದೇ ಹೆಸರು ಗಳಿಸಿದ್ದೀರಿ. ಸಂಸದರಾಗಿಯೂ ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡುವ ಶಕ್ತಿಯನ್ನು ಆ ದೇವರು ತಮಗೆ ದಯಪಾಲಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ವಿಧಾನ ಪರಿಷತ್ತಿನ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.