ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವೇಶ್ವರ ಜಯಂತಿ ಆಚರಣೆ

0
dwd
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು.

Advertisement

ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಗೋಪಾಲ್ ಬ್ಯಾಕೋಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಮಾಜದ ಮುಖಂಡರು, ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here