ಆಗಸ್ಟ್ 18ರಂದು ಹಾಲಗೊಂಡ ಬಸವೇಶ್ವರ ರಥೋತ್ಸವ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಕಲ್ಯಾಣ ಚಾಲುಕ್ಯ ಅರಸರ ಕಾಲದಲ್ಲಿ ನಿರ್ಮಿಸಲಾದ ಇಲ್ಲಿಯ ಐತಿಹಾಸಿಕ ಹಾಲಗೊಂಡ ಬಸವೇಶ್ವರ ದೇವಸ್ಥಾನದ ರಥೋತ್ಸವವು ಆಗಸ್ಟ್ 18ರಂದು ಜರುಗಲಿದೆ.

Advertisement

ಸಂಜೆ 4 ಗಂಟೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಅಡ್ನೂರು ಗ್ರಾಮದ ಬೃಹನ್ಮಠದ ಪಂಚಾಕ್ಷರ ಶಿವಾಚಾರ್ಯ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಪೂರ್ವ ಬಸವೇಶ್ವರ ಮೂರ್ತಿಗೆ ವಿಶೇಷ ಪೂಜೆ ನೆರವೇರಲಿದೆ. ನಂತರ ಮಹಾ ಮೃತ್ಯುಂಜಯ ಹೋಮ ನಡೆಯುವುದು. ಮುಂಜಾನೆ 9ರಿಂದ ಸಂಜೆ 4ರವರೆಗೂ 14 ಭಜನಾ ಸಂಘಗಳಿಂದ ನಾಡಿನ ವಿವಿಧ ಶರಣರ ಭಾವಚಿತ್ರ ಮೆರವಣಿಗೆ, ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ನಡೆಯಲಿದೆ.

ಆ.19ರಂದು ಲಘು ರಥೋತ್ಸವ, ಆ.20ರಿಂದ 3 ದಿನಗಳ ಕಾಲ ಬಯಲು ಕುಸ್ತಿ ಸ್ಪರ್ಧೆಗಳು ಜರುಗಲಿವೆ ಎಂದು ಜಾತ್ರಾ ಸಮಿತಿಯ ಪ್ರಕಟಣೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here