ವಿಜಯಸಾಕ್ಷಿ ಸುದ್ದಿ, ರೋಣ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳ ಬಡವರ ಆರೋಗ್ಯದ ಬಗ್ಗೆ ಬಾವಾಸಾಬ ಬೆಟಗೇರಿ ಅಭಿಮಾನಿ ಬಳಗದವರು ಹೊಂದಿರುವ ಕಾಳಜಿ ಸ್ವಾಗತಾರ್ಹ ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.
ಅವರು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಬಾವಾಸಾಬ ಬೆಟಗೇರಿ ಅಭಿಮಾನಿ ಬಳಗದಿಂದ ಅಂಜುಮನ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರೋಣ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಬಾವಾಸಾಬ ಬೆಟಗೇರಿಯವರು ತಮ್ಮ ಆಡಳಿತದ ಅವಧಿಯಲ್ಲಿ ಜನ ಮೆಚ್ಚುವಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಶಾಲಾ ಮಕ್ಕಳಿಗೆ ಛತ್ರಿಗಳನ್ನು ವಿತರಿಸಿ ನೆರವಾಗಿದ್ದಾರೆ. ಇಂದು ಬಡವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮೂಲಕ ಅವರಿಗೆ ಉಚಿತ ತಪಾಸಣೆ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾವಾಸಾಬ ಬೆಟಗೇರಿ ವಹಿಸಿದ್ದರು.
ಗುರುಪಾದ ಶ್ರೀಗಳು ಸಾನ್ನಿಧ್ಯ, ಹಜರತ ಸುಲೇಮಾನ ದರ್ಗಾದ ಅಜ್ಜನವರು ನೇತೃತ್ವ ವಹಿಸಿದ್ದರು.
ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ಉಪಾಧ್ಯಕ್ಷ ಹನುಮಂತಪ್ಪ ತಳ್ಳಿಕೇರಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ, ಎಚ್.ಎಸ್. ಸೋಂಪುರ, ಯುಸೂಪ್ ಇಟಗಿ, ವಿ.ಬಿ. ಸೋಮನಕಟ್ಟಿಮಠ, ಗದಿಗೇಪ್ಪ ಕಿರೇಸೂರ, ದುರ್ಗಪ್ಪ ಹಿರೇಮನಿ, ಸಂಗಪ್ಪ ಜಿಡ್ಡಿಬಾಗಿಲ, ಈಶ್ವರ ಕಡಬಿನಕಟ್ಟಿ, ದಾವಲಸಾಬ ಬಾಡಿನ ಮುಂತಾದವರು ಉಪಸ್ಥಿತರಿದ್ದರು.



