ಬಿಗ್ ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ರೌಂಡ್ ನಡೆಯುತ್ತಿದ್ದು, ಮೂರು ತಿಂಗಳ ಬಳಿಕ ತಮ್ಮ ಕುಟುಂಬದವರನ್ನು ನೋಡಿ ಸ್ಪರ್ಧಿಗಳು ಭಾವುಕರಾಗಿದ್ದಾರೆ. ಇದೇ ರೀತಿ ಮೋಕ್ಷಿತಾಗೆ ಬಿಗ್ಬಾಸ್ ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ. ಆದರೆ ತಮ್ಮನನ್ನು ನೋಡಿ ಅಕ್ಕ ಮೋಕ್ಷಿತಾ ಕಣ್ಣೀರು ಹಾಕಿರುವುದು ಎಲ್ಲರ ಕರುಳು ಚುರುಕ್ ಅನ್ನುತ್ತೆ.
ಹೊಸ ವರ್ಷ ಬಿಗ್ಬಾಸ್ ಮನೆಯಲ್ಲೂ ಅದ್ಧೂರಿಯಾಗಿ ಸೆಲೆಬ್ರೆಷನ್ ಮಾಡಲಾಗಿದೆ. ಎಲ್ಲ ಸ್ಪರ್ಧಿಗಳು ಸಖತ್ ಆಗಿಯೇ ಕುಣಿದು ಕುಪ್ಪಳಿಸುತ್ತಿದ್ದರು. ಮೋಕ್ಷಿತಾ ಕೂಡ ನಾನೇನು ಕಮ್ಮಿ ಇಲ್ಲ ಎನ್ನುವಂತೆ ಬಿಗ್ಬಾಸ್ಗೆ ಬಂದ ಮೇಲೆ ಪ್ರೀತಿಯ ಸಹೋದರನ್ನು ಮರೆತು ಡ್ಯಾನ್ಸ್ ಮಾಡುತ್ತಿದ್ದರು. ಆದರೆ ಬಿಗ್ಬಾಸ್ ಮನೆಗೆ ಕುಟುಂಬ ಬರುತ್ತಿದ್ದಂತೆ ತಮ್ಮನನ್ನು ನೋಡಿ ಮೋಕ್ಷಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಇಷ್ಟು ದಿನ ಬಿಟ್ಟು ಇದ್ದಿದ್ದೆ. ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಪುಟಾಣಿ ಎಂದು ಕರೆದರೂ ವೀಲ್ ಚೇರ್ ಮೇಲಿದ್ದ ಸಹೋದರ, ಮೋಕ್ಷಿತಾರನ್ನ ಯಾರೆಂದು ಗುರುತಿಸಲಿಲ್ಲ. ಅದಕ್ಕೆ ನನ್ನನ್ನು ಮರೆತು ಹೋಗಿದ್ದಾನೆ. ಇಷ್ಟು ದಿನ ಮನೆಯಲ್ಲಿ ಇರದಿದ್ದಕ್ಕೆ ನನ್ನನ್ನು ಮರೆತು ಹೋಗಿ ಬಿಟ್ಟಿದ್ದಾನೆ ಎಂದು ಮೋಕ್ಷಿತಾ, ತಮ್ಮನನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಮೋಕ್ಷಿತಾ ತಂದೆ, ತಾಯಿ ಕೂಡ ಕಣ್ಣೀರು ಹಾಕಿರುವುದು ಎಲ್ಲರನ್ನೂ ಮೂಕವಿಸ್ಮಿತರಾಗಿ ಮಾಡಿದೆ.