ಬೆಂಗಳೂರು: ಕೋಟ್ಯಂತರ ಮಂದಿಯ ಕನಸಿನ ಸೂರು ಬೆಂಗಳೂರು ಕೆಂಪೇಗೌಡರು ಕಟ್ಟಿದ್ದ ನಾಲ್ಕು ಗಡಿ ಗೋಪುರಗಳನ್ನು ದಾಟಿ ಬೆಳೆದು ಅದೆಷ್ಟೋ ವರ್ಷಗಳಾಯಿತು. ನಾಲ್ಕೈದು ಕಿಲೋ ಮೀಟರ್ ಸುತ್ತಳತೆಯ ಬೆಂಗಳೂರು ಇದೀಗ 50-60 ಕಿಲೋ ಮೀಟರ್ ವಿಸ್ತೀರ್ಣಕ್ಕೂ ಮೀರಿ ಬೆಳೆದುಬಿಟ್ಟಿದೆ. ದಿನದಿಂದ ದಿನಕ್ಕೆ ಬೆಂಗಳೂರಿನ ವ್ಯಾಪ್ತಿ ದೊಡ್ಡದಾಗುತ್ತಲೇ ಹೋಗುತ್ತಿದೆ. ಇದಕ್ಕಾಗಿ ಸರ್ಕಾರ ಹೊಸದೊಂದು ಯೋಚನೆ ಮಾಡಿದ್ದು ‘ಗ್ರೇಟರ್ ಬೆಂಗಳೂರು ಅಥಾರಿಟಿ’ ಅಸ್ತಿತ್ವಕ್ಕೆ ತರಲು ತೀರ್ಮಾನಿಸಿದೆ.
ಹೌದು ಸಾಕಷ್ಟು ಪರ-ವಿರೋಧದ ಮಧ್ಯೆ ನಾಳೆಯಿಂದ ಅಂದರೆ ಮೇ 15ರಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ ಆಗಲಿದೆ. ಈ ಬಗ್ಗೆ ಗ್ರೇಟರ್ ಬೆಂಗಳೂರು ಆಡಳಿತಕ್ಕೆ ರಾಜ್ಯ ಸರ್ಕಾರದಿಂದ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆ ಮೂಲಕ ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣವೇ ಬದಲಾಗಲಿದೆ.
ಈಗಾಗಲೇ ಗ್ರೇಟರ್ ಬೆಂಗಳೂರಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬೆನ್ನಲ್ಲೇ ಅಲರ್ಟ್ ಆದ ಸರ್ಕಾರ ನಾಳೆ (ಮೇ 15)ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ತಯಾರಿ ನಡೆಸಿತ್ತು. ಹಾಗಾಗಿ ನಾಳೆಯಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ಥಿತ್ವಕ್ಕೆ ಬರುತ್ತಿದೆ. ಆ ಮೂಲಕ ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣವೇ ಬದಲಾಗಲಿದೆ. ಬೆಂಗಳೂರಿನ ಪ್ರಾದೇಶಿಕತೆ-ಭೌಗೋಳಿಕತೆಯ ವ್ಯಾಪ್ತಿ-ವಿಸ್ತೀರ್ಣ ಕೂಡ ಹೆಚ್ಚಾಗಲಿದೆ.
ಬೆಂಗಳೂರಿನ ಆಡಳಿತ ನೋಡಿಕೊಳ್ಳುತ್ತಿದ್ದ ಬಿಬಿಎಂಪಿ ಇನ್ಮುಂದೆ ನೆನಪಾಗಿ ಉಳಿಯಲಿದೆ. ಬೆಂಗಳೂರನ್ನ ವಿಭಾಗ ಮಾಡಿ ಆಡಳಿತ ನಡೆಸುವ ಸರ್ಕಾರದ ಗ್ರೇಟರ್ ಬೆಂಗಳೂರು ಕನಸಿಗೆ ಇತ್ತೀಚೆಗಷ್ಟೇ ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಇದೀಗ ಸರ್ಕಾರ ಈ ವಿಧೆಯಕ ಜಾರಿ ಮಾಡಿ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಮಾಡಿದೆ. ಹಾಗಾಗಿ ನಾಳೆ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ.