ಬೆಳಗಾವಿ: ಅನ್ಯ ಕೋಮಿನ ಯುವಕನ ಕಿರುಕುಳಕ್ಕೆ ಮನನೊಂದು ಯುವತಿ ನೇಣಿಗೆ ಶರಣಾಗಿರುವ ಘಟನೆ ಶಿಗ್ಗಾಂವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದಲ್ಲಿ ನಡೆದಿದೆ. ಶಿಲ್ಪಾ (22) ಮೃತ ಯುವತಿಯಾಗಿದ್ದು, ಫರ್ನಿಚರ್ ಅಂಗಡಿಯೊಂದರ ಮಾಲೀಕ ರಂಜಾನ್ ನದಾಫ್ ಕಿರುಕುಳ ನೀಡಿದ ಆರೋಪಿಯಾಗಿದ್ದಾನೆ.
Advertisement
ಮೃತ ಶಿಲ್ಪಾ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದರು. ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ನವೀನ್ ಆರೋಪಿ ರಂಜಾನ್ ನದಾಫ್ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.
ಆರೋಪಿ ರಂಜಾನ್ ನದಾಫ್ ಮೃತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡಿದ್ದನಂತೆ. ಈತನ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.