ಟಿ20 ವಿಶ್ವಕಪ್ ನಡುವೆಯೇ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ಪುರುಷರ ತಂಡದಲ್ಲಿ ಒಟ್ಟು 30 ಆಟಗಾರರು ಸೇರಿದ್ದು, A, B, C ಗ್ರೇಡ್ನಲ್ಲಿ ವರ್ಗೀಕರಣ ಮಾಡಲಾಗಿದೆ. A ಗ್ರೇಡ್ನಲ್ಲಿ ಶುಭ್ಮನ್ ಗಿಲ್, ಜಸ್ಪ್ರಿತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದಾರೆ ಮತ್ತು ಅವರು ಅತ್ಯಧಿಕ ಸಂಭಾವನೆ ಪಡೆಯಲಿದ್ದಾರೆ. B ಗ್ರೇಡ್ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಕುಲ್ದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಮೊಹಮ್ಮದ್ ಸಿರಾಜ್ ಮತ್ತು ಶ್ರೇಯಸ್ ಅಯ್ಯರ್ ಸೇರಿದ್ದಾರೆ.
C ಗ್ರೇಡ್ನಲ್ಲಿ ತಿಲಕ್ ವರ್ಮಾ, ಅಕ್ಸರ್ ಪಟೇಲ್, ಶಿವಂ ದುಬೆ, ಸಂಜು ಸ್ಯಾಮ್ಸನ್ ಸೇರಿದಂತೆ 16 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಬಾರಿ BCCI A+ ಗ್ರೇಡ್ ಅನ್ನು ರದ್ದುಗೊಳಿಸಿದ್ದು, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಿರುವ ಕಾರಣ ಅವರನ್ನು ಹಿಂಬಡ್ತಿ ನೀಡಲಾಗಿದೆ.
ಮಹಿಳಾ ತಂಡದಲ್ಲಿ ಒಟ್ಟು 21 ಆಟಗಾರ್ತಿಯರು ಸೇರಿದ್ದು, A ಗ್ರೇಡ್ನಲ್ಲಿ ಹರ್ಮನ್ಪ್ರೀತ್ ಕೌರ್, ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್ ಮತ್ತು ದೀಪ್ತಿ ಶರ್ಮಾ, B ಗ್ರೇಡ್ನಲ್ಲಿ ರೇಣುಕಾ ಠಾಕೂರ್, ಶೆಫಾಲಿ ವರ್ಮಾ, ರಿಚಾ ಘೋಷ್ ಮತ್ತು ಸ್ನೇಹ ರಾಣಾ, C ಗ್ರೇಡ್ನಲ್ಲಿ ರಾಧಾ ಯಾದವ್, ಅಮಂಜೋತ್ ಕೌರ್ ಸೇರಿದಂತೆ 13 ಆಟಗಾರ್ತಿಯರು ಸ್ಥಾನ ಪಡೆದಿದ್ದಾರೆ.



