HomeSports Newsಅಂಪೈರ್‌ಗೆ ಐಸ್ ಪ್ಯಾಕ್ ಎಸೆತ: ಟಿಮ್ ಡೇವಿಡ್​ಗೆ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಅಂಪೈರ್‌ಗೆ ಐಸ್ ಪ್ಯಾಕ್ ಎಸೆತ: ಟಿಮ್ ಡೇವಿಡ್​ಗೆ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

For Dai;y Updates Join Our whatsapp Group

Spread the love

ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿಗೆ ಬಿಸಿಸಿಐ ಶಾಕ್ ನೀಡಿದ್ದು, ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಟಿಮ್ ಡೇವಿಡ್‌ಗೆ ಒಂದು ಪಂದ್ಯ ನಿಷೇಧದ ಶಿಕ್ಷೆ ವಿಧಿಸಿದೆ.

ಫೈನಲ್ ಪಂದ್ಯದಲ್ಲಿ ಅಂಪೈರ್ ನಿತಿನ್ ಮೆನನ್ ಅವರತ್ತ ಐಸ್ ಪ್ಯಾಕ್ ಎಸೆದ ಕಾರಣ ಬಿಸಿಸಿಐ ಈ ಕಠಿಣ ಕ್ರಮ ಕೈಗೊಂಡಿದೆ. ಇದರೊಂದಿಗೆ ಟಿಮ್ ಡೇವಿಡ್ ಅವರ ಪಂದ್ಯ ಶುಲ್ಕದ 50 ಪ್ರತಿಶತ ದಂಡವಾಗಿ ಕಡಿತಗೊಳಿಸಲಾಗಿದ್ದು, ಎರಡು ಡಿಮೆರಿಟ್ ಅಂಕಗಳನ್ನು ಸಹ ನೀಡಲಾಗಿದೆ.

ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.9 ಉಲ್ಲಂಘನೆ ಮಾಡಿದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಪಂದ್ಯದ ವೇಳೆ ಆಟಗಾರರು ಅಂಪೈರ್ ಅಥವಾ ಯಾವುದೇ ಅಧಿಕೃತ ವ್ಯಕ್ತಿಯತ್ತ ಕ್ರಿಕೆಟ್ ಸಾಮಗ್ರಿ ಅಥವಾ ವಸ್ತುಗಳನ್ನು ಆಕ್ರಮಣಕಾರಿ ರೀತಿಯಲ್ಲಿ ಎಸೆಯುವುದು ಈ ನಿಯಮದ ಉಲ್ಲಂಘನೆ ಎಂದು ಸ್ಪಷ್ಟಪಡಿಸಲಾಗಿದೆ.

ವರದಿಗಳ ಪ್ರಕಾರ, ಟಿಮ್ ಡೇವಿಡ್ ಲೀಗ್ ಹಂತದಿಂದಲೇ ಈ ಸೀಸನ್‌ನಲ್ಲಿ ಮೂರನೇ ಬಾರಿ ಶಿಸ್ತು ಕ್ರಮಕ್ಕೆ ಒಳಗಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಎರಡು ಪಂದ್ಯಗಳಲ್ಲಿ ನಡೆದ ನಿಯಮ ಉಲ್ಲಂಘನೆಗೆ ಕ್ರಮವಾಗಿ ಒಂದು ಮತ್ತು ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಗಿತ್ತು. ಒಟ್ಟಾರೆ ಐದು ಡಿಮೆರಿಟ್ ಅಂಕಗಳು ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಒಂದು ಪಂದ್ಯ ನಿಷೇಧ ವಿಧಿಸಲಾಗಿದೆ.

ಈ ನಿರ್ಧಾರದ ಪರಿಣಾಮವಾಗಿ ಟಿಮ್ ಡೇವಿಡ್ 2027ರ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿ ಪರ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ.

ಈ ಸೀಸನ್‌ನಲ್ಲಿ ಟಿಮ್ ಡೇವಿಡ್ 16 ಪಂದ್ಯಗಳಲ್ಲಿ 305 ರನ್ ಗಳಿಸಿದ್ದು, 33.88 ಸರಾಸರಿ ಹಾಗೂ 23 ಸಿಕ್ಸರ್‌ಗಳೊಂದಿಗೆ ಆರ್‌ಸಿಬಿ ಚಾಂಪಿಯನ್ ಸಾಧನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!