ಬಿಕಾಂ 1ನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ

0
BCom 1st Sem Exam Result
Spread the love

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ಬಿಕಾಂ ವಿಭಾಗದ 1ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ಸಂಜನಾ ಅಕ್ಷಯ ಕುರಾ (675) ಪ್ರಥಮ, ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಮತ್ತು ಪ್ರಿನ್ಸಿಪಲ್ಸ್ ಆಫ್ ಮಾರ್ಕೆಟಿಂಗ್ ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದಿದ್ದಾಳೆ.

Advertisement

ಸುನೈನಾ ಕಡಕೋಳ (648) ದ್ವಿತೀಯ, ಶ್ರಾವಣಿ ಖಾನಾಪೂರ (621) ಮೂರನೇ ಸ್ಥಾನ, ವೈಭವ ಯಜಮಾನ (602) ನಾಲ್ಕನೇಯ ಸ್ಥಾನ, ಮಧು ಹಾದಿಮನಿ (584) ಅಂಕ ಪಡೆದು ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಸಂಯೋಜಕರಾದ ಪ್ರೊ. ಅಲ್ವಿನಾ ಡಿ ಹಾಗೂ ಸಿಬ್ಬಂದಿ ವರ್ಗದವರು ಶ್ಲಾಘಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here