HomeGadag Newsಅಧಿಕ ರಕ್ತದೊತ್ತಡದ ಬಗ್ಗೆ ಎಚ್ಚರಿಕೆಯಿರಲಿ

ಅಧಿಕ ರಕ್ತದೊತ್ತಡದ ಬಗ್ಗೆ ಎಚ್ಚರಿಕೆಯಿರಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಈಗಿನ ಆಧುನಿಕ ಜೀವನ ಶೈಲಿಯಿಂದಾಗಿ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, 100 ಜನರಲ್ಲಿ 25 ಜನರಿಗೆ ಅಧಿಕ ರಕ್ತದೊತ್ತಡ ಕಂಡುಬರುತ್ತದೆ. ಮದ್ಯಪಾನ, ತಂಬಾಕು ಸೇವನೆ, ಅಹಿತಕರ ಆಹಾರ ಸೇವನೆ, ದೈಹಿಕ ಚಟುವಟಿಕೆಗಳ ಕೊರತೆ, ಅತಿಯಾದ ದೇಹದ ತೂಕ, ಮಾನಸಿಕ ಒತ್ತಡ ಇವೆಲ್ಲ ಕಾರಣದಿಂದ ಅಧಿಕ ರಕ್ತದೊತ್ತಡದ ಪ್ರಕರಣಗಳು ಹೆಚ್ಚಾಗುತ್ತಿವೆ. ಆರಂಭಿಕ ಹಂತದಲ್ಲಿ ಅಧಿಕ ರಕ್ತದೊತ್ತಡವನ್ನು ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಹೃದಯ ಸಂಬಂಧಿ ಖಾಯಿಲೆ, ಪಾರ್ಶ್ವವಾಯು, ಮೂತ್ರಪಿಂಡದ ಖಾಯಿಲೆ ಇತ್ಯಾದಿ ದೀರ್ಘಕಾಲದ ರೋಗಗಳಿಂದ ಬಳಲಬೇಕಾಗುತ್ತದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರೀತ್ ಕೋನಾ ಎಚ್ಚರಿಸಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ವಿಭಾಗ, ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸ್ಪೂರ್ತಿ ಪ್ಯಾರಾ ಮೆಡಿಕಲ್ ಕಾಲೇಜು ಗದಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಅಧಿಕ ರಕ್ತದೊತ್ತಡ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಅಧಿಕ ರಕ್ತದೊತ್ತಡ ಕುರಿತು ಹಮ್ಮಿಕೊಂಡಿದ್ದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದಲ್ಲಿ 30 ವರ್ಷ ಮೇಲ್ಪಟ್ಟವರಿಗೆ ವರ್ಷದಲ್ಲಿ ಕನಿಷ್ಠ ಒಂದು ಬಾರಿ ಅಧಿಕ ರಕ್ತದೊತ್ತಡ ಮತ್ತು ಮಧುಮೇಹವನ್ನು ಪರೀಕ್ಷೆ ಮಾಡಲಾಗುತ್ತದೆ ಮತ್ತು ಆರಂಭಿಕ ಹಂತದಲ್ಲಿ ರೋಗಗಳನ್ನು ಪತ್ತೆ ಮಾಡಿ ಸೂಕ್ತ ಚಿಕಿತ್ಸೆಯನ್ನು ಒದಗಿಸಲಾಗುತ್ತದೆ. ಜಿಲ್ಲೆಯಲ್ಲಿ ಪ್ರತಿ ಹಳ್ಳಿಗಳಲ್ಲಿ 30 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ಕೈಗೊಳ್ಳುತ್ತ ನಮ್ಮ ಇಲಾಖೆಯ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ರಕ್ತದೊತ್ತಡ, ಮಧುಮೇಹ ಹಾಗೂ 3 ಸಾಮಾನ್ಯ ಕ್ಯಾನ್ಸರ್‌ಗಳ ತಪಾಸಣೆಯನ್ನು ಕೈಗೊಳ್ಳುತ್ತಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಶಿಕಾಂತ ಕಳಕಣ್ಣವರ, ಭುವನೇಶ್ವರಿ ಪಾಟೀಲ ಸಾಮದರ್ಭಿಕವಾಗಿ ಮಾತನಾಡಿದರು. ದೀಪಾ ಹಿರೇಮನಿ ಪ್ರಾರ್ಥಿಸಿದರು. ಮುತ್ತುನಗೌಡ ಎಸ್.ರಬ್ಬನಗೌಡ್ರ ಕಾರ್ಯಕ್ರಮ ನಿರೂಪಿಸಿದರು. ಉಮಾ ಮಹೇಶ್ವರಿ ವಂದಿಸಿದರು.

ಈ ಸಂದರ್ಭದಲ್ಲಿ ಎಪಿಡೆಮಿಯೊಲಾಜಿಸ್ಟ್ ಡಾ. ಪ್ರವೀಣ ನಿಡಗುಂದಿ, ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ, ಜಿಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕ ಜಸ್ವಿನ್ ತೇಗೂರ, ಹಿ.ಆ. ನಿರೀಕ್ಷಣಾಧಿಕಾರಿ ರಮೇಶ ಅರಹುಣಸಿ, ಜಿಲ್ಲಾ ಆರ್ಥಿಕ ಮತ್ತು ಸಲಕರಣೆ ಸಲಹೆಗಾರ ವಿಠಲ್ ನಾಯಕ್, ಡಾಟಾ ಮ್ಯಾನೇಜರ್ ವೀರೇಶ ಮದಕಟ್ಟಿ, ಫಯಾಜ್ ಮಕಾನದಾರ, ಡಿಈಓ ಹಾಗೂ ಜಿಲ್ಲಾ ಸಮೀಕ್ಷಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಹಾಗೂ ಸ್ಪೂರ್ತಿ ಪ್ಯಾರಾ ಮೆಡಿಕಲ್ ಕಾಲೇಜಿನ ಎಲ್ಲ ಉಪನ್ಯಾಸಕರು, ಆಡಳಿತ ವರ್ಗದವರು, ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ವಿಭಾಗದ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ. ರವಿ ಕಡಗಾವಿ ಮಾತನಾಡಿ, ಅಧಿಕ ರಕ್ತದೊತ್ತಡ ಎಂದು ಕರೆಯುತ್ತಾರೆ. ಆದ್ದರಿಂದ 30 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ವರ್ಷದಲ್ಲಿ ಕನಿಷ್ಠ 1 ಬಾರಿ ಅಧಿಕ ರಕ್ತದೊತ್ತಡ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!