ಬೆಂಗಳೂರಿನಲ್ಲಿ ಮಾಂಸ ತಿನ್ನೋ ಮುನ್ನ ಹುಷಾರ್: ಬಂತು ಟನ್‌ಗಟ್ಟಲೇ ನಾಯಿ ಮಾಂಸ!

0
Spread the love

ಬೆಂಗಳೂರು:- ಮಾಂಸ ಪ್ರಿಯರೇ ಹುಷಾರ್. ನಾವು ಹೇಳುತ್ತಿರುವ ಸುದ್ದಿ ನಿಮ್ಮನ್ನು ಬೆಚ್ಚಿ ಬೀಳಿಸುತ್ತೆ ಎಚ್ಚರ. ಹಿಂದೆ ಮುಂದೆ ನೋಡದೆ ಮಾಂಸ ತಿನ್ನೋ ಮುನ್ನ ಈ ಸ್ಟೋರಿ ಮಿಸ್ ಮಾಡ್ದೆ ನೋಡಿ..

Advertisement

ಹೌದು, ರಾಜಧಾನಿ ಬೆಂಗಳೂರಿನಲ್ಲಿ ಮಾಂಸ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಲವು ಹಿಂದು ಕಾರ್ಯಕರ್ತರು ದಾಳಿ ನಡೆಸಿದ ವೇಳೆ ಮಾಂಸದ ಪಾರ್ಸೆಲ್‌ಗಳಲ್ಲಿ ನಾಯಿ ಮಾಂಸ ಕಂಡುಬಂದಿದೆ. ಇದರಿಂದ ಸ್ಥಳದಲ್ಲಿ‌ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪಗಳನ್ನು ಅಬ್ದುಲ್‌ ರಜಾಕ್‌ ಅಲ್ಲಗಳೆದಿದ್ದಾರೆ. ನಾಯಿ ಮಾಂಸದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಸಂಘಟನೆಗಳು ದಾಳಿ ಮಾಡಿದ್ದು, ಈ ವೇಳೆ ಸಾವಿರಾರು ಕೆ.ಜಿ ಮಾಂಸ ಪತ್ತೆಯಾಗಿದೆ. ಆದರೆ, ಎರಡು ದಿನಕ್ಕೊಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೆಯುತ್ತಿದೆ.

ಆಹಾರ ಇಲಾಖೆ ಅಧಿಕಾರಿಗಳು ಬೇಕಿದ್ದರೆ ಬಂದು ಚೆಕ್ ಮಾಡಲಿ ಎಂದು ಅಬ್ದುಲ್‌ ರಜಾಕ್‌ ಹೇಳಿದ್ದಾರೆ. ಮಾಂಸದ ಪಾರ್ಸೆಲ್‌ಗಳಲ್ಲಿ ಪ್ರಾಣಿಯ ಬಾಲ ಉದ್ದವಾಗಿರೋದು ಕಂಡುಬಂದಿದ್ದರಿಂದ, ಕುರಿ ಬಾಲ ಈ ರೀತಿ ಇರುತ್ತದಾ ಎಂದು ಹಿಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಈ ವೇಳೆ ರಾಜಸ್ಥಾನ ಕುರಿಗಳಿಗೆ ಇದೇ ರೀತಿ ಬಾಲ ಉದ್ದವಾಗಿರುತ್ತೆ, ಅದನ್ನು ನಾಯಿ ಎನ್ನುತ್ತಿದ್ದಾರೆ ಎಂದು ಮುಸ್ಲಿಂ ಮುಖಂಡ ಹೇಳಿದ್ದಾರೆ.

ಪುನೀತ್ ಕೆರೆಹಳ್ಳಿ ಹಣ ವಸೂಲಿ ಮಾಡಲು ಈ ರೀತಿ ಮಾಡುತ್ತಿದ್ದಾರೆ. ನಾಳೆ ಈ ಬಗ್ಗೆ ಸುದ್ದಿಗೋಷ್ಠಿ ಮಾಡುತ್ತೇವೆ. ಅವರ ವಿರುದ್ಧ ದೂರು ನೀಡುತ್ತೇವೆ ಎಂದು ಅಬ್ದುಲ್‌ ರಜಾಕ್‌ ತಿಳಿಸಿದ್ದಾರೆ


Spread the love

LEAVE A REPLY

Please enter your comment!
Please enter your name here