ಬೀಚಿ ಬಳಗದ ಮಾಸಿಕ ಸಭೆ ಇಂದು

0
Beachi club monthly meeting today
Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ : ಪಟ್ಟಣದ ಬೀಚಿ ಬಳಗದ ಮಾಸಿಕ ಸಭೆಯು ಜೂನ್ 13ರಂದು ಸಂಜೆ 6ಕ್ಕೆ ಇಲ್ಲಿನ ಹಿರೇಮಠದ ಸಭಾಭವನದಲ್ಲಿ ನಡೆಯಲಿದೆ ಎಂದು ಬೀಚಿ ಬಳಗದ ಸಂಚಾಲಕ ಈಶ್ವರ ಬೆಟಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಸಭೆಯಲ್ಲಿ ಸೇವೆಯಿಂದ ನಿವೃತ್ತರಾದ ಬೀಚಿ ಬಳಗದ ಸದಸ್ಯರಿಗೆ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಬಳಗದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಸಮಾರಂಭ ಜರುಗಲಿದೆ.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಅನ್ನದಾನ ವಿಜಯ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಎನ್. ಹೂಲಗೇರಿ ಪಾಲ್ಗೊಳ್ಳಲಿದ್ದು, ಶಿಕ್ಷಕ ಬಿ.ಟಿ. ತಾಳಿ `ನಾನು ಓದಿದ ಪುಸ್ತಕ’ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಬೀಚಿ ಬಳಗದ ಅಧ್ಯಕ್ಷ ಕೆ.ಎಸ್. ಕಳಕಣ್ಣವರ ವಹಿಸಲಿದ್ದು, ಬೀಚಿ ಬಳಗದ ಸರ್ವ ಸದಸ್ಯರು, ಸಾಹಿತ್ಯಾಭಿಮಾನಿಗಳು ಪಾಲ್ಗೊಳ್ಳುವಂತೆ ಬೀಚಿ ಬಳಗದ ಸಂಚಾಲಕ ಈಶ್ವರ ಬೆಟಗೇರಿ ವಿನಂತಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here