• About
  • Advertise
  • Privacy & Policy
  • Contact
Monday, November 2, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಶಿಕ್ಷಣವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಿ

Vijaya Sakshi News Desk by Vijaya Sakshi News Desk
August 10, 2025
in Gadag News
ಶಿಕ್ಷಣವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಿ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿದವರಲ್ಲಿ ಶರಣ ಶ್ರೀ ನುಲಿಯ ಚಂದಯ್ಯನವರೂ ಒಬ್ಬರು. ಕಾಯಕವೇ ಲಿಂಗ ಪೂಜೆ ಎಂದು ಸಾರಿದ ಇವರು ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯವನ್ನು ಶ್ರದ್ಧೆಯಿಂದ ಮಾಡಬೇಕು ಎಂದು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಸಂದೇಶ ನೀಡಿದ್ದಾರೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ನುಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ನುಲಿಯ ಚಂದಯ್ಯ ಸಮುದಾಯದವರು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಗದಗ ಜಿಲ್ಲೆಯಲ್ಲಿ ಉನ್ನತ ಮಟ್ಟದ ಕ್ರೀಡಾ ಸೌಲಭ್ಯಗಳು ಸುಲಭವಾಗಿ ಲಭ್ಯವಾಗುವಂತೆ ಈಗಾಗಲೇ ಅಗತ್ಯಕ್ಕನುಗುಣವಾಗಿ ಕ್ರೀಡಾಂಗಣ, ಈಜುಗೊಳಗಳನ್ನು ತೆರೆಯಲಾಗಿದೆ. ಇವುಗಳ ಸದ್ಬಳಕೆ ಮಾಡಿಕೊಂಡು ಇನ್ನಷ್ಟು ಕ್ರಿಡಾ ಸಾಧನೆ ಮಾಡಬೇಕು. ಸಮಾಜದ ಮಕ್ಕಳು ಶಿಕ್ಷಣವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಬೇಕು. ಪ್ರತಿಯೊಬ್ಬರೂ ತಮ್ಮಲ್ಲಿರುವ ಪ್ರತಿಭೆ ಬಳಸಿಕೊಂಡು ಶ್ರೇಷ್ಠ ವ್ಯಕ್ತಿಗಳಾಗಬೇಕು ಎಂದು ಸಚಿವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು, ಸಾಹಿತ್ಯ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಸಮಾಜದ ಪ್ರಮುಖರಾದ ಮೋಹನ ಕಟ್ಟಿಮನಿ, ಎಸ್.ಎನ್. ಬಳ್ಳಾರಿ, ವಾಜಿ ಗಡಾದ, ಪರಶುರಾಮ ಕಟ್ಟಿಮನಿ, ಮೇದಾಪೂರ, ಸುರೇಶ ಕಟ್ಟಿಮನಿ, ಮೋಹನ ಭಜಂತ್ರಿ, ಲಕ್ಷ್ಮವ್ವ ಭಜಂತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಮುದಾಯದವರು ಹಾಜರಿದ್ದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ ವಂದಿಸಿದರು. ನಗರದ ವಿ.ಡಿ.ಎಸ್ ಬಾಲಕರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಂ.ಸಿ. ಕಟ್ಟಿಮನಿ ಉಪನ್ಯಾಸ ನೀಡಿದರು.

ನುಲಿಯ ಚಂದಯ್ಯನವರು ತಮ್ಮ ಅರ್ಥಪೂರ್ಣ ವಚನಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ಶ್ರಮಿಸಿದ್ದಾರೆ. ಇವರ ಕಾಯಕವು ಅರಣ್ಯಕ್ಕೆ ಹೋಗಿ ಹುಲ್ಲು ತಂದು ಹಗ್ಗ ಮಾಡಿ ಮಾರುವದಾಗಿತ್ತು. ಹಗ್ಗ ಮಾರಿ ಬಂದ ಹಣದಿಂದ ಅವರು ದಾಸೋಹ ಕೈಗೊಳ್ಳುತ್ತಿದ್ದರು. ಕಾಯಕ ನಿಷ್ಟೆ, ಜಂಗಮ ದಾಸೋಹ ಇವರ ವಚನಗಳಲ್ಲಿ ಗಮನಾರ್ಹವಾದವುಗಳಾಗಿವೆ. ನುಲಿಯ ಚಂದಯ್ಯನವರು ಅನುಭವ ಮಂಟಪದಲ್ಲಿ ಶ್ರೇಷ್ಠ ಶರಣರಾಗಿದ್ದರು. ಕಾಯಕ ಸೇವೆಗಿಂತ ಇನ್ನೊಂದು ಸೇವೆ ಇಲ್ಲ ಎಂದು ಸಾರಿದ ನುಲಿಯ ಚಂದಯ್ಯನವರ ವಚನಗಳ ಸಂದೇಶದ ಕುರಿತು ಹೊಸ ಪೀಳಿಗೆಗೆ ಅರಿವು ಮೂಡಿಸುವ ಕೆಲಸವಾಗಬೇಕು.

– ಎಚ್.ಕೆ. ಪಾಟೀಲ.

ಜಿಲ್ಲಾ ಉಸ್ತುವಾರಿ ಸಚಿವರು.

ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ

2024 ಹಾಗೂ 2025ರ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ಭೂಮಿಕಾ ಪ್ರಶಾಂತ ಬಾಗಲಕೋಟಿ, ಸ್ಪೂರ್ತಿ ತಿಪ್ಪಣ್ಣ ಸೀತಾರಹಳ್ಳಿ, ಯಶಸ್ವಿನಿ ಮಾರುತಿ ಕಟ್ಟಿಮನಿ, ಚಂದ್ರಶೇಖರ ಹನಮಂತಪ್ಪ ಭಜಂತ್ರಿ, ಪೂಜಾ ಪ್ರಶಾಂತ ಬಾಗಲಕೋಟಿ ಹಾಗೂ ಬಿ.ವಿ.ಎ. ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಪ್ರಸನ್ನ ರಮೇಶ ಗಡಾದ, ವೈದ್ಯಕೀಯ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಪ್ರತಿಭಾ ಕಟ್ಟಿಮನಿ ಅವರನ್ನು ಸನ್ಮಾನಿಸಲಾಯಿತು.

ಸಮಾಜದ ಮುಖಂಡರಿಗೆ ಸನ್ಮಾನ

ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿವಾನಂದ ಫಕೀರಪ್ಪ ಭಜಂತ್ರಿ, ಸಮಾಜ ಸೇವಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ಎಚ್.ಬಿ. ವೀರಾಪೂರ, ಪರಶುರಾಮ ಎಫ್.ಕಟ್ಟಿಮನಿ, ಮೋಹನ್ ಎಚ್.ಕಟ್ಟಿಮನಿ, ಮೋಹನ ಭಜಂತ್ರಿ, ಹುಲ್ಲಪ್ಪ ಭಜಂತ್ರಿ, ವಿಜಯ ಮುಳಗುಂದ, ಡಾ. ಕೆ. ಲೋಕೇಶ ಅವರನ್ನು ಸನ್ಮಾನಿಸಲಾಯಿತು.

Tags: BreakingNewsgadagnewsh.k patilKarnatakaVijayasakshivijayasakshinews
ShareSendShare
Previous Post

ಸಮಾನ ಅವಕಾಶ ಪಡೆದು ಜ್ಞಾನವಂತರಾಗಿ

Next Post

ಅರಳು ವಿಶೇಷ ಶಾಲೆಯಲ್ಲಿ ರಕ್ಷಾ ಬಂಧನ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಅರಳು ವಿಶೇಷ ಶಾಲೆಯಲ್ಲಿ ರಕ್ಷಾ ಬಂಧನ

ಅರಳು ವಿಶೇಷ ಶಾಲೆಯಲ್ಲಿ ರಕ್ಷಾ ಬಂಧನ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಂದಿನಿ ಮೊಸರಿನ ಬೆಲೆ 2 ರೂ‌. ಇಳಿಕೆಗೆ ಡಿಕೆಶಿ ಸೂಚನೆ; ಹಾಲಿನ ದರ ಏರಿಕೆ ಬಗ್ಗೆ ಹೇಳಿದ್ದೇನು?

ನಂದಿನಿ ಮೊಸರಿನ ಬೆಲೆ 2 ರೂ‌. ಇಳಿಕೆಗೆ ಡಿಕೆಶಿ ಸೂಚನೆ; ಹಾಲಿನ ದರ ಏರಿಕೆ ಬಗ್ಗೆ ಹೇಳಿದ್ದೇನು?

November 2, 2026
ಬಾಕಿ ಹಣಕ್ಕಾಗಿ ಗುತ್ತಿಗೆದಾರರ ಬಿಗಿಪಟ್ಟು; ಡಿ.ಕೆ. ಶಿವಕುಮಾರ್ ಜೊತೆ ಮಹತ್ವದ ಸಭೆ!

ಬಾಕಿ ಹಣಕ್ಕಾಗಿ ಗುತ್ತಿಗೆದಾರರ ಬಿಗಿಪಟ್ಟು; ಡಿ.ಕೆ. ಶಿವಕುಮಾರ್ ಜೊತೆ ಮಹತ್ವದ ಸಭೆ!

November 2, 2026
ಹುಣಸೆಹಣ್ಣು ಬೇಗ ಹಾಳಾಗುತ್ತಿದೆಯಾ? ದೀರ್ಘಕಾಲ ಸಂಗ್ರಹಿಸಿಡಲು ಈ ಸರಳ ಟಿಪ್ಸ್ ಫಾಲೋ ಮಾಡಿ!

ಹುಣಸೆಹಣ್ಣು ಬೇಗ ಹಾಳಾಗುತ್ತಿದೆಯಾ? ದೀರ್ಘಕಾಲ ಸಂಗ್ರಹಿಸಿಡಲು ಈ ಸರಳ ಟಿಪ್ಸ್ ಫಾಲೋ ಮಾಡಿ!

November 2, 2026
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಹಗರಣ; ಇಬ್ಬರು ಹಿರಿಯ IPS ಅಧಿಕಾರಿಗಳ ನೇತೃತ್ವದಲ್ಲಿ SIT ರಚಿಸಿದ ಹೈಕೋರ್ಟ್

November 2, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಂದಿನಿ ಮೊಸರಿನ ಬೆಲೆ 2 ರೂ‌. ಇಳಿಕೆಗೆ ಡಿಕೆಶಿ ಸೂಚನೆ; ಹಾಲಿನ ದರ ಏರಿಕೆ ಬಗ್ಗೆ ಹೇಳಿದ್ದೇನು?

ನಂದಿನಿ ಮೊಸರಿನ ಬೆಲೆ 2 ರೂ‌. ಇಳಿಕೆಗೆ ಡಿಕೆಶಿ ಸೂಚನೆ; ಹಾಲಿನ ದರ ಏರಿಕೆ ಬಗ್ಗೆ ಹೇಳಿದ್ದೇನು?

November 2, 2026
ಬಾಕಿ ಹಣಕ್ಕಾಗಿ ಗುತ್ತಿಗೆದಾರರ ಬಿಗಿಪಟ್ಟು; ಡಿ.ಕೆ. ಶಿವಕುಮಾರ್ ಜೊತೆ ಮಹತ್ವದ ಸಭೆ!

ಬಾಕಿ ಹಣಕ್ಕಾಗಿ ಗುತ್ತಿಗೆದಾರರ ಬಿಗಿಪಟ್ಟು; ಡಿ.ಕೆ. ಶಿವಕುಮಾರ್ ಜೊತೆ ಮಹತ್ವದ ಸಭೆ!

November 2, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper