ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿದ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದಲ್ಲಿ ನಡೆದಿದೆ.
ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ ಬಳಿಕ ಭಕ್ತರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ತಕ್ಷಣ ಅಸ್ವಸ್ಥರನ್ನು ಕಬ್ಬೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಈವರೆಗೆ ಚಿಕಿತ್ಸೆ ಪಡೆದ 71 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದ ಸುಮಾರು 30 ಜನರಿಗೆ ಚಿಕಿತ್ಸೆ ಮುಂದುವರಿದಿದೆ.
ಘಟನೆ ತಿಳಿಯುತ್ತಿದ್ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಅಸ್ವಸ್ಥಗೊಂಡಿರುವುದರಿಂದ ಪ್ರಸಾದದ ಗುಣಮಟ್ಟದ ಕುರಿತು ಪರಿಶೀಲನೆ ನಡೆಸುವ ಅಗತ್ಯ ಎದುರಾಗಿದೆ.










