ಡಾ. ಮನಮೋಹನ್ ಸಿಂಗ್ ನಿಧನ: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ರದ್ದು, ರಾಜ್ಯದಲ್ಲಿ 7 ದಿನ ಶೋಕಾಚಾರಣೆ!

0
Spread the love

ಬೆಂಗಳೂರು:- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನ ಹಾಗೂ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

Advertisement

ಬೆಳಗಾವಿ ಸುವರ್ಣಸೌಧದಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಹಾಗೂ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಗೆ ಆಗಮಿಸಿದ್ದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ.


Spread the love

LEAVE A REPLY

Please enter your comment!
Please enter your name here