ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನ ದೇಶದ ಒಂದು ಇತಿಹಾಸ ಎಂದು ಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಮಾತನಾಡಿದ ಅವರು, ಬೆಳಗಾವಿ ಕಾಂಗ್ರೆಸ್ ಅಧಿವೇಶನ ದೇಶದ ಒಂದು ಇತಿಹಾಸ. ಕಾಂಗ್ರೆಸ್ ಇತಿಹಾಸವೇ ದೇಶದ ಇತಿಹಾಸ ಮತ್ತು ಇದು ದೇಶಕ್ಕೆ ದೊಡ್ಡ ಶಕ್ತಿ.
ಅವತ್ತು ಜವಾಹರಲಾಲ್ ನೆಹರು, ಗಂಗಾಧರ್ ರಾವ್ ದೇಶಪಾಂಡೆ ಇಬ್ಬರು ಜನರಲ್ ಸೆಕ್ರೆಟರಿಗಳಿದ್ದರು. ಇವರಿಬ್ಬರು ಗಾಂಧೀಜಿಯವರನ್ನು ಕರೆದುಕೊಂಡು ಬಂದು ಅಧ್ಯಕ್ಷರಾಗಿ ಮಾಡಿ ಕಾಂಗ್ರೆಸ್ ಅಧಿವೇಶನ ನಡೆಸಿದ್ದರು ಎಂದು ಹೇಳಿದ್ದಾರೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಕ್ಕೆ ಪಕ್ಷಾತೀತವಾಗಿ ಎಲ್ಲರಿಗೂ ಆಹ್ವಾನವಿದೆ. ಇದೊಂದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ ಆಗಿರಲಿದೆ. ಸ್ಪೀಕರ್, ಸಭಾಪತಿ, ಎಲ್ಲಾ ಪಕ್ಷದ ಶಾಸಕರು, ಸಂಸದರನ್ನು ಆಹ್ವಾನಿಸಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ಗಂಗಾಧರರಾವ್ ದೇಶಪಾಂಡೆ ಅವರ ಕುಟುಂಬಕ್ಕೂ ಆಹ್ವಾನ ಮಾಡುತ್ತಿದ್ದೇವೆ ಎಂದು ಹೇಳಿದರು.