HomeGadag Newsವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಿ : ಗೋವಿಂದರೆಡ್ಡಿ

ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಿ : ಗೋವಿಂದರೆಡ್ಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಬೆಳಗಾವಿ ವಿಭಾಗ ಮಟ್ಟದ ಬಾಲ್ ಬಾಡ್ಮಿಂಟನ್ ಪಂದ್ಯಾವಳಿ ಹಾಗೂ ಗದಗ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಎಂ. ಹವಳದ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಮಹೇಶ ಕುರಿಯವರ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಕೆ.ಬಿ. ಕೊಣ್ಣೂರ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಗದಗ ಗ್ರಾಮೀಣ ಅಧ್ಯಕ್ಷರಾದ ಪವಾರ, ಮಾಧ್ಯಮಿಕ ಶಾಲಾ ನೌಕರರ ಸಂಘದ ಕಾರ್ಯದರ್ಶಿ ಎನ್.ಎಸ್. ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕರು, ಕ್ಷೇತ್ರ ಸಮನ್ವಯಾಧಿಕಾರಿಗಳು ಸೇರಿದಂತೆ 9 ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಹಾಜರಿದ್ದರು.

ಶಾರದಾ ಬಂಡಿ ಪ್ರಾರ್ಥಿಸಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಸರ್ವರನ್ನು ಸ್ವಾಗತಿಸಿದರು. ಎಂ.ಎಸ್. ಕುಚಬಾಳ ಕಾರ್ಯಕ್ರಮ ನಿರೂಪಿಸಿದರು. ಶಿವಕುಮಾರ ಕುರಿಯವರ ವಂದಿಸಿದರು.

ಕ್ರೀಡಾ ಸ್ಪರ್ಧೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಆದರೆ ಪಾಲ್ಗೊಳ್ಳುವುದು ಮುಖ್ಯ. ಸೋಲೇ ಗೆಲುವಿಗೆ ಸೋಪಾನವಾಗಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಹ ಭಾಗವಹಿಸುವುದು ಅವಶ್ಯಕವಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ತಂಡಗಳೊಂದಿಗೆ ಸಮನ್ವಯತೆಯಿಂದ ಹೊಂದಿಕೊಳ್ಳುವ ಸ್ವಭಾವ ಬರುತ್ತದೆ. ಕ್ರೀಡಾಪಟುಗಳು ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ ಯಶಸ್ಸಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!