ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಆರಂಭವಾಗಿದೆ. ನವೆಂಬರ್ 7 ರಂದು ಬೆಳಗಾವಿಗೆ ಸಭಾಪತಿ ಭೇಟಿ ನೀಡಿ, ಸುವರ್ಣ ವಿಧಾನಸೌಧದಲ್ಲಿ ಸಿದ್ಧತೆ ಪರಿಶೀಲಿಸಲಿದ್ದಾರೆ. ಬಳಿಕ ನ.7ರಂದು ಅಧಿಕೃತವಾಗಿ ಅಧಿವೇಶನದ ದಿನಾಂಕ ಘೋಷಣೆ ಮಾಡಲಿದ್ದಾರೆ.
Advertisement
ಊಟ, ವಸತಿ, ಇಂಧನ, ಮುದ್ರಣ, ವಾಹನ ಸೇರಿ 10 ಸಮಿತಿಗಳನ್ನು ರಚನೆ ಮಾಡಲಾಗಿದೆ. ಯಶಸ್ವಿ ಅಧಿವೇಶನಕ್ಕೆ ಡಿಸಿ ನಿತೇಶ್ ಪಾಟೀಲ್ ನೇತೃತ್ವದ ಅಧಿಕಾರಿಗಳ ತಂಡದಿಂದ ಸಿದ್ಧತೆ ಕೈಗೊಳ್ಳುತ್ತಿದೆ. ಜಿಲ್ಲಾಡಳಿತ ಕಳೆದ ವರ್ಷ ಸರ್ಕಾರಕ್ಕೆ ಎರಡೂವರೆ ಕೋಟಿ ಉಳಿತಾಯ ಮಾಡಿತ್ತು.