ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ೨೬-೧೨-೧೯೨೪ರಂದು ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಎಐಸಿಸಿ ಅಧಿವೇಶನಕ್ಕೆ ಕರ್ನಾಟಕದ ಇತಿಹಾಸದಲ್ಲಿ ಒಂದು ವಿಶೇಷ ಸ್ಥಾನವಿದೆ. ಬೆಳಗಾವಿ ಅಧಿವೇಶನ ಶತಮಾನೋತ್ಸವದ ಅಂಗವಾಗಿ ಡಿ.೨೭ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವತಿಯಿಂದ ಬೃಹತ್ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಗದಗ ತಾಲೂಕಾಧ್ಯಕ್ಷ ಅಶೋಕ ಮಂದಾಲಿ ಮನವಿ ಮಾಡಿದ್ದಾರೆ.
ಡಿಸೆಂಬರ್ ೨೭ರಂದು ಬೆಳಗಾವಿಯ ಕ್ಲಬ್ ರಸ್ತೆಯ ಸಿ.ಪಿ.ಎಡ್ ಮೈದಾನದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ಜರುಗಲಿದ್ದು, ಈ ಸಮಾವೇಶವನ್ನು ಅರ್ಥಪೂರ್ಣಗೊಳಿಸಲು ಜಿಲ್ಲೆಯಾದ್ಯಂತ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬೇಕಾದ ಅವಶ್ಯಕತೆಯಿದೆ. ಆದ್ದರಿಂದ, ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು-ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಎಪಿಎಂಸಿ ಪಕ್ಷದ ಅಧ್ಯಕ್ಷರು ಹಾಗೂ ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಅಧ್ಯಕ್ಷರು-ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್ಟಿಯುಸಿ ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲೀಗಲ್ ರೀಪಾರ್ಮ್ಸ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗಗಳ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



