ಬೆಳಗಾವಿ: ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯ ಎಂಎಲ್ಐಆರ್‌ಸಿ ಕ್ಯಾಂಪ್‌ನಲ್ಲಿ ನಡೆದಿದೆ. ಸುನೀಲ್ ಸಲಾಂ (37) ಮೃತಪಟ್ಟ ಯೋಧನಾಗಿದ್ದು, ಯೋಧ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಹೃದಯಾಘಾತ ಸಂಭವಿಸಿದೆ.
Advertisement
ಹೃದಯಾಘಾತದಿಂದ ಯೋಧ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಯೋಧ ಮೃತಪಡುವ ಅಂತಿಮ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಚಂದಗಡ ತಾಲೂಕಿನ ಘುಳೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.