ಬೆಳಗಾವಿ: ಕಬ್ಬು ಕತ್ತರಿಸುವ ಬೃಹತ್ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಜಮೀನಿನಲ್ಲಿ ನಡೆದಿದೆ.
ಸಪ್ತಸಾಗರ ಗ್ರಾಮದ ಶೋಭಾ ಶ್ರೀಕಾಂತ ಸಂಕ್ರಟ್ಟಿ (54) ಮೃತಪಟ್ಟ ಮಹಿಳೆಯಾಗಿದ್ದು, ತಮ್ಮ ಸ್ವಂತ ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ,
ಯಂತ್ರದ ಬುಡಕ್ಕೆ ಸಿಲುಕಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಸ್ಥಳ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಾಗಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.



