ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಕಳಸಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ಬೆಳಧಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೆಲ್ಲರೂ ಆಸಕ್ತಿಯಿಂದ ಭಾಗವಹಿಸಿ ಶಾಲೆಗೆ ಮತ್ತು ಊರಿಗೆ ಗೌರವ ತರಬೇಕೆಂದು ಕಿವಿಮಾತು ಹೇಳಿದರು.
ಶರದರಾವ್ ಹುಯಿಲಗೋಳ ಮಾತನಾಡಿ, ಇಂತಹ ಅಚ್ಚುಕಟ್ಟಾದ ಕಾರ್ಯಕ್ರಮ ನಮ್ಮ ಊರಿನ ಶಾಲೆಯಲ್ಲಿ ನೆರವೇರುತ್ತಿರುವುದು ಸಂತೋಷ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಕಳಸಾಪೂರ ಬಸವ ಕೇಂದ್ರದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಖಂಡಮ್ಮನವರ, ಗ್ರಾ.ಪಂ ಅಧ್ಯಕ್ಷೆ ಅನುಸೂಯಾ ಬೆಟಗೇರಿ, ಉಪಾಧ್ಯಕ್ಷೆ ರಾಜೇಶ್ವರಿ ಘೋಡ್ಕೆ, ಲಕ್ಷ್ಮವ್ವ ಚವ್ಹಾಣ, ಮಂಜುಳಾ ನರಸಾಪೂರ, ಟಿ.ಬಿ. ಮುಧೋಳ, ಎ.ಎಂ. ಸುಳ್ಳದ, ಎಂ.ಬಿ. ಪಾಟೀಲ ಮುಂತಾದವರು ಪಾಲ್ಗೊಂಡಿದ್ದರು.
ಎಸ್.ಎಸ್. ಲಕ್ಷಕೊಪ್ಪ ಕಾರ್ಯಕ್ರಮ ನಿರೂಪಿಸಿದರು. ಆರ್.ಆರ್. ಯೋಗಿ ವಂದಿಸಿದರು.