ಬೆಂಗಳೂರು: ಬಳ್ಳಾರಿ ಜನರ ಕನಸುಗಳನ್ನು ಈಡೇರಿಸಲು ಶ್ರಮಿಸುವೆ ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, 14 ವರ್ಷಗಳ ನಂತರ ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಸುಪ್ರೀಂಕೋರ್ಟ್ ಆದೇಶ ಬಂದಿದೆ.
ಬಳ್ಳಾರಿಯಲ್ಲಿ ವಿವಿಧ ಪ್ರಮುಖ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸುತ್ತೇನೆ. ಕೊನೆಯ ಉಸಿರು ಇರುವವರೆಗೂ ಬಳ್ಳಾರಿಯಲ್ಲಿ ಇರುತ್ತೇನೆ. ಅದಲ್ಲದೆ ಬಳ್ಳಾರಿಯ ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಕನಸುಗಳಿವೆ. ಮುಂದಿನ ದಿನಗಳಲ್ಲಿ ಬಳ್ಳಾರಿ ಜನರ ಕನಸುಗಳನ್ನು ಈಡೇರಿಸಲು ಶ್ರಮಿಸುವೆ ಎಂದು ಹೇಳಿದರು.



