ಬೆಂಗಳೂರು: 20ನೇ ಮಹಡಿಯಿಂದ 15 ವರ್ಷದ ಬಾಲಕಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿಯಲ್ಲಿರುವ ಅಸೆಟ್ಸ್ ಮಾರ್ಕ್ ಅಪಾರ್ಟ್‌ಮೆಂಟ್ ನಲ್ಲಿ ನಡೆದಿದೆ. ಅವಂತಿಕಾ ಚೌರಾಸಿಯಾ (15) ಮೃತ ಬಾಲಕಿಯಾಗಿದ್ದು,
Advertisement
ಕಾಡುಗೋಡಿಯ ಅಪಾರ್ಟ್ಮೆಂಟ್‌ನಲ್ಲಿದ್ದ ಬಾಲಕಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದಳು. ಎಸ್‌ಎಸ್‌ಎಲ್‌ಸಿಯ ಪರೀಕ್ಷೆ ಹತ್ತಿರ ಬರುತ್ತಿದ್ದ ಕಾರಣ ಓದುವಂತೆ ತಾಯಿ ಗದರಿಸಿದ್ದಾರೆ.
ಇದರಿಂದ ಕೋಪಗೊಂಡ ಬಾಲಕಿ ವಾಸಿಸುತ್ತಿದ್ದ ಅಪಾರ್ಟ್ಮೆಂಟ್‌ನ 20ನೇ ಮಹಡಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.