HomeKarnataka NewsBengaluru 2nd Airport: ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಕ್ಷಿಣ ಭಾಗದಲ್ಲಿ ನಿರ್ಮಾಣ? ಸಿಎಂ...

Bengaluru 2nd Airport: ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಕ್ಷಿಣ ಭಾಗದಲ್ಲಿ ನಿರ್ಮಾಣ? ಸಿಎಂ ಡಿಕೆ ಶಿವಕುಮಾರ್ ಮಾಹಿತಿ

For Dai;y Updates Join Our whatsapp Group

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನಗರದ ದಕ್ಷಿಣ ಭಾಗದಲ್ಲಿ ಬರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಈ ಹಿಂದೆ ನಡೆದ ಅಧ್ಯಯನ ಹಾಗೂ ಸ್ಥಳ ಪರಿಶೀಲನೆ ಕುರಿತ ವರದಿಯನ್ನು ನೀಡಿದ್ದಾರೆ ಎಂದು ಹೇಳಿದರು.

ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಜಾಗ ಆಯ್ಕೆ ಮಾಡುವಾಗ ಹಲವು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ. ಹೆಚ್ಚು ಗ್ರಾಮಗಳನ್ನು ಸ್ಥಳಾಂತರಿಸುವ ಪರಿಸ್ಥಿತಿ ಬರಬಾರದು, ಗುಡ್ಡ ಪ್ರದೇಶಗಳು ಇರಬಾರದು ಹಾಗೂ ಕಾಮಗಾರಿಗೆ ಅನುಕೂಲವಾಗುವಂತಹ ಜಾಗವನ್ನು ಗುರುತಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.

ಸದ್ಯ ಯಾವುದೇ ನಿರ್ದಿಷ್ಟ ಸ್ಥಳ ಅಂತಿಮವಾಗಿಲ್ಲ. ಆದರೆ ಎರಡನೇ ವಿಮಾನ ನಿಲ್ದಾಣ ಬೆಂಗಳೂರಿನ ದಕ್ಷಿಣ ಭಾಗದಲ್ಲೇ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಯ್ಕೆ ಮಾಡುವ ಜಾಗದ ಬೆಲೆ ಕಡಿಮೆ ಇರಬೇಕು. ಇದರಿಂದ ಸರ್ಕಾರದ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಬೇಕು. ಜೊತೆಗೆ ಜನವಸತಿ ಪ್ರದೇಶಗಳ ಸ್ಥಳಾಂತರ ತಪ್ಪಿಸುವ ನಿಟ್ಟಿನಲ್ಲಿ ಕಾರ್ಯಸಾಧ್ಯವಾದ ಜಾಗವನ್ನು ಆಯ್ಕೆ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img