ಬೆಂಗಳೂರು:- ಹಲವು ದಿನಗಳಿಂದ ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಜರುಗಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಅಗ್ನಿ ಕೆನ್ನಾಲಿಗೆಗೆ ಇಡೀ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೂ ಹರಡುವ ಸಾಧ್ಯತೆಯಿದ್ದುದರಿಂದ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರೈಲ್ವೆ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಇಂತಹ ಅಗ್ನಿ ಅವಘಡ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.



