ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ ವಿಚಿತ್ರ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಬೆಳಗ್ಗಿನ ಜಾವ ಸುಮಾರು 3 ಗಂಟೆ ಹೊತ್ತಿಗೆ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಕಳ್ಳನೊಬ್ಬ, ರಸ್ತೆಯಲ್ಲಿನ ಮನೆಗಳ ಗೇಟ್ ಪರಿಶೀಲಿಸಿ, ಲಾಕ್ ಇಲ್ಲದ ಮನೆಯೊಳಗೆ ನುಗ್ಗಿ LPG ಸಿಲಿಂಡರ್ ಕದ್ದು ಪರಾರಿಯಾಗಿದ್ದಾನೆ.
ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಬೆನ್ನಲ್ಲೇ ಕಾಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.



