ಬೆಂಗಳೂರು:– ಪುಲಿಕೇಶಿ ನಗರದ ಡೇವಿಸ್ ರಸ್ತೆಯಲ್ಲಿ ಬೆಳ್ಳಂ ಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಜರುಗಿದೆ.
Advertisement
ಅದೃಷ್ಟವಶಾತ್ ಘಟನೆಯಿಂದ ಭಾರೀ ಅನಾಹುತ ತಪ್ಪಿದೆ. ಘಟನೆ ವೇಳೆ ಇಬ್ಬರು ಯುವಕರು ಮನೆಯಲ್ಲೇ ಇದ್ದರು. ಬಳಿಕ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಟೆರಸ್ ಮೇಲೇರಿದ್ದಾರೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಯುವಕರನ್ನ ರಕ್ಷಿಸಿದ್ದಾರೆ.
ಘಟನೆಯಲ್ಲಿ ಯುವಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.