ಬೆಂಗಳೂರು:- ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಗುತ್ತಿಗೆದಾರರಿಗೆ ಗಡುವು ಕೊಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ X ಮಾಡಿರುವ ಅವರು, ʻಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ ಎಂದು ತಿಳಿಸಿದ್ದಾರೆ.
ಒಟ್ಟಾರೆ ಬೆಂಗಳೂರಿನಲ್ಲಿ ಅದೇಕೋ ಗುಂಡಿ ಗಂಡಾಂತರ ತಪ್ಪುವ ಲಕ್ಷಣವೇ ಕಾಣುತ್ತಿಲ್ಲ. ಹೆಜ್ಜೆ ಹೆಜ್ಜೆಗೂ ಗುಂಡಿಗಳು ಕಣ್ಣಿಗೆ ರಾಚುತ್ತಿವೆ. ವಾಹನ ಸವಾರರು ರಸ್ತೆಯಲ್ಲಿ ಸರ್ಕಸ್ ರೀತಿ ಸಂಚರಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನ ಗುಂಡಿಗಳು ಹರಾಜು ಹಾಕ್ತಿವೆ. ಬಿಬಿಎಂಪಿಯಿಂದ ಗ್ರೇಟರ್ ಬೆಂಗಳೂರು ಆಗಿ ಬದಲಾದ್ರೂ ರಸ್ತೆಗುಂಡಿಗಳ ಹಾವಳಿ ತಪ್ಪುತ್ತಿಲ್ಲ. ಗ್ರೇಟರ್ ಬೆಂಗಳೂರು ರಸ್ತೆಗುಂಡಿಗಳಲ್ಲೂ ಗ್ರೇಟಾಗಿದೆ ಅನ್ನೋದರಲ್ಲಿ ತಪ್ಪೇನಿಲ್ಲ ಎನ್ನಲಾಗಿದೆ.



