ಬೆಂಗಳೂರು:- ಬನ್ನೇರುಘಟ್ಟ ಪೋಲೀಸರು ಕಾರ್ಯಾಚರಣೆ ನಡೆಸಿ ಬೈಕ್ ಅಡ್ಡಗಟ್ಟಿ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ನಿಖಿಲ್, ಪ್ರಶಾಂತ್ ಅಲಿಯಾಸ್ ಪಿಂಕಿ, ಅರುಣ್ ಕುಮಾರ್, ಹರೀಶ್, ರಕ್ಷಿತ್ ಎಂದು ಗುರುತಿಸಲಾಗಿದೆ.
ಬಂಧಿತ ಗ್ಯಾಂಗ್, ಶ್ರೀ ಕೈಲಾಸ್ ಎಂಬಾತನನ್ನ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ಗ್ಯಾಂಗ್ ದರೋಡೆ ಮಾಡಿ ಎಸ್ಕೇಪ್ ಆಗಿತ್ತು. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೈಲಾಸ್ ಅವರು ಉಡಾನ್ ಕಂಪನಿಗೆ ಸೇರಿದ ಹಣವನ್ನ ಕಲೆಕ್ಷನ್ ಮಾಡುತ್ತಿದ್ದರು. ಕಳೆದ ಫೆ.1 ರಂದು ಹಣ ಕಲೆಕ್ಷನ್ ಮಾಡಿದ್ದರು. ಬೈಕ್‌ನಲ್ಲಿ ಬರುವಾಗ ಎರಡು ಬೈಕ್‌ಗಳಲ್ಲಿ ಗ್ಯಾಂಗ್ ಹಿಂಬಾಲಿಸಿತ್ತು. ಲಾಂಗ್‌ನಿಂದ ಹಲ್ಲೆ ನಡೆಸಿ ಹಣ, ಬೈಕ್ ರಾಬರಿ ಮಾಡಿ ಎಸ್ಕೇಪ್ ಆಗಿತ್ತು. ರಸ್ತೆಯಲ್ಲಿ ಬೈಕ್ ಬಿಟ್ಟು ಹಣ ಎಗರಿಸಿ ಪರಾರಿಯಾಗಿತ್ತು. 31,38,625 ರೂ. ಹಣವನ್ನ ರಾಬರಿ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದರು.
ಮೂರು ತಂಡಗಳ ರಚನೆ ಮಾಡಿ ಅರೋಪಿಗಳಿಗೆ ತಲಾಶ್ ನಡೆಸಿದ್ದರು. ಪರಿಚಿತರೇ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೈಲಾಸ್‌ಗೆ ಹಣ ನೀಡಿದ್ದ ಉಡಾನ್ ಕಂಪನಿಯ ಸಿಬ್ಬಂದಿ ವಿಚಾರಣೆಗೊಳಪಡಿಸಲಾಯಿತು. ವಿಚಾರಣೆ ವೇಳೆ ರಾಬರಿ ಪ್ಲ್ಯಾನ್ ಮಾಸ್ಟರ್ ಮೈಂಡ್ ಬಂಧಿಸಲಾಯಿತು. ಆರೋಪಿಗಳನ್ನು ಇದೀಗ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.



