Bengaluru: ಜೂನ್ 15ರವರೆಗೆ ಬೈಕ್ ಟ್ಯಾಕ್ಸಿ ಸೇವೆ ವಿಸ್ತರಿಸಿದ ಹೈಕೋರ್ಟ್!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಜೂನ್ 15ರವರೆಗೆ ಬೈಕ್ ಟ್ಯಾಕ್ಸಿ ಸೇವೆ ವಿಸ್ತರಿಸಿ ಹೈಕೋರ್ಟ್ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್​ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

Advertisement

ಆ ಮೂಲಕ ರೈಡ್-ಹೇಲಿಂಗ್ ಕಂಪನಿಗಳಿಗೆ ಬೈಕ್ ಟ್ಯಾಕ್ಸಿ ಸೇವೆಗಳನ್ನು ಒದಗಿಸಲು ಇನ್ನೂ ಒಂದು ತಿಂಗಳು ಕಾಲಾವಕಾಶ ಸಿಕ್ಕಂತಾಗಿದೆ. ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಯನ್ನು ಮುಂದುವರೆಸಲು ನಿರ್ದೇಶನ ಕೋರಿ ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸ್‌ ಲಿಮಿಟೆಡ್​ ಸೇರಿದಂತೆ ಇತರೆ ಕಂಪನಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಪರಿಗಣಿಸಿ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ರೋಪೆನ್ ಟ್ರಾನ್ಸ್‌ಫರ್ಮೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಪ್ರಕಾರ, ಕರ್ನಾಟಕದಲ್ಲಿ ಆರು ಲಕ್ಷಕ್ಕೂ ಹೆಚ್ಚು ನೋಂದಾಯಿತ ಬೈಕ್ ಟ್ಯಾಕ್ಸಿಗಳಿದ್ದು, ಆ ಮೂಲಕ ಸವಾರರು ತನ್ನ ಜೀವನ ನಡೆಸುತ್ತಿದ್ದಾರೆ. ಒಂದು ವೇಳೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದರೇ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಬಹುದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ಪ್ರಸ್ತುತ ಬೈಕ್ ಟ್ಯಾಕ್ಸಿಗಳಿಗಾಗಿ ಸಮಗ್ರ ನೀತಿಯನ್ನು ರೂಪಿಸುತ್ತಿದೆ. ಕೈಗೆಟುಕುವ ಬೆಲೆ ಮತ್ತು ಬೇಡಿಕೆ ಹಿನ್ನೆಲೆ ಬೈಕ್ ಟ್ಯಾಕ್ಸಿ ಸೇವೆಗಳು ನಗರ ಪ್ರದೇಶದಲ್ಲಿ ಹೆಚ್ಚುತ್ತಿವೆ. ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್​, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ನಡೆಸಲು ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿದೆ.


Spread the love

LEAVE A REPLY

Please enter your comment!
Please enter your name here