ಬೆಂಗಳೂರು:- ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್‌ನಲ್ಲಿ ರಾತ್ರಿ ಸಂಚಾರ ಬಂದ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನೆಲೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಬಗ್ಗೆ X ಮಾಡಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರು, ಹೊಸೂರು ರಸ್ತೆ ಎಲಿವೇಟೆಡ್ ಫ್ಲೈಓವರ್‌ನಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ರಾತ್ರಿಯಿಂದಲೇ ಅನ್ವಯವಾಗುವಂತೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ಎಲ್ಲಾ ರೀತಿಯ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಜಾರಿಯಲ್ಲಿ ಇರಲಿದೆ.



