“ಪುಷ್ಪ”ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸ್: ಪ್ರದರ್ಶನ ರದ್ದಿಗೆ ಆದೇಶ! ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ!

0
Spread the love

ಬೆಂಗಳೂರು: ಕರ್ನಾಟಕದಲ್ಲಿ ‘ಪುಷ್ಪ 2’ಗೆ ಬಿಗ್ ಶಾಕ್ ಎದುರಾಗಿದ್ದು, ಪ್ರದರ್ಶನ ರದ್ದಿಗೆ ಬೆಂಗಳೂರು ಕಮಿಷನರ್ ಖಡಕ್ ಸೂಚನೆ ಕೊಟ್ಟಿದ್ದಾರೆ.

Advertisement

ಸಮಯ ಪಾಲನೆ ಮಾಡದೇ ‘ಪುಷ್ಪ 2’ ಚಿತ್ರ ಪ್ರದರ್ಶನಕ್ಕೆ ಮುಂದಾದ ಥಿಯೇಟರ್‌ಗೆ ಬೆಂಗಳೂರು ಜಿಲ್ಲಾಧಿಕಾರಿ ಶಾಕ್ ನೀಡಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ಗೆ ಚಿತ್ರಕ್ಕೆ ಕರ್ನಾಟಕದಲ್ಲೂ ಫ್ಯಾನ್ಸ್ ಇದ್ದು, ಜಿಲ್ಲಾಧಿಕಾರಿಗಳ ಈ ಸೂಚನೆ ಇದೀಗ ಅಭಿಮಾನಿಗಳಿಗೂ ಬೇಸರ ಮೂಡಿಸಿದೆ.

ಬೆಂಗಳೂರು ಕೆಲವು ಚಿತ್ರಮಂದಿರಗಳು ನಿಗದಿಪಡಿಸಿದ ಅವಧಿಗೂ ಮುನ್ನ ‘ಪುಷ್ಪ 2’ ಸಿನಿಮಾವನ್ನು ಪ್ರದರ್ಶನ ಮಾಡುತ್ತಿದೆ. ಕರ್ನಾಟಕದಲ್ಲಿ ಯಾವುದೇ ಸಿನಿಮಾವನ್ನು ಬೆಳಗ್ಗೆ 6 ಗಂಟೆಗೂ ಮುನ್ನ ಪ್ರದರ್ಶನ ಮಾಡಬಾರದೆಂಬ ರಾಜ್ಯ ಸರ್ಕಾರದ ನಿಯಮವಿದೆ.

ಹೀಗಿದ್ದರೂ ‘ಪುಷ್ಪ 2’ ಚಿತ್ರ ಪ್ರದರ್ಶನ ಮಾಡುತ್ತಿರುವ ಚಿತ್ರಮಂದಿರದ ಮಾಲೀಕರು ಬೆಳ್ಳಂಬೆಳಗೆ 3.45ರಿಂದ ಅಭಿಮಾನಿಗಳಿಗಾಗಿ ವಿಶೇಷ ಪ್ರದರ್ಶನವನ್ನು ಏರ್ಪಡಿಸಿದೆ. ಇದನ್ನು ಇದಕ್ಕೆ ಬೆಂಗಳೂರು ಜಿಲ್ಲಾಧಿಕಾರಿ ಕಡಿವಾಣ ಹಾಕಿದ್ದಾರೆ.

ಚಲನಚಿತ್ರ ಪ್ರದರ್ಶನ ನಿಯಮದ ಪ್ರಕಾರ, ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಗಂಟೆಯ ಒಳಗೆ ಯಾವುದೇ ಚಿತ್ರಮಂದಿರಗಳಲ್ಲಿ ಚಿತ್ರಗಳನ್ನು ಪ್ರದರ್ಶನ ಮಾಡುವಂತೆ ಇಲ್ಲ ಎಂಬ ರಾಜ್ಯ ಸರ್ಕಾರದ ಆದೇಶವಿದ್ದರೂ ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ಅವಧಿಗೂ ಮುನ್ನ ಚಿತ್ರ ಪ್ರದರ್ಶನಗೊಳ್ಳುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ.

ಹೀಗಾಗಿ 43 ಥಿಯೇಟರ್‌ಗಳ ವಿರುದ್ಧ ಸಿನಿಮಾ ಪ್ರದರ್ಶನ ಮಾಡದಂತೆ ಬೆಂಗಳೂರು ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here