ಬೆಂಗಳೂರಿನ ರಸ್ತೆಗಳು ತುಂಬಾ ಕೆಟ್ಟದಾಗಿದೆ, ಸಹಾಯಮಾಡಿ: PM ಮೋದಿಗೆ ಪತ್ರ ಬರೆದ ಐದರ ಪುಟಾಣಿ!

0
Spread the love

ಬೆಂಗಳೂರು:- ಬೆಂಗಳೂರಿನ ರಸ್ತೆಗಳು ತುಂಬಾ ಕೆಟ್ಟದಾಗಿದೆ, ಸಹಾಯಮಾಡಿ ಎಂದು PM ಮೋದಿಗೆ ಪತ್ರ ಬರೆದು ಐದು ವರ್ಷದ ಪುಟಾಣಿ ಗಮನ ಸೆಳೆದಿದೆ.

Advertisement

ಎಸ್, ಬೆಂಗಳೂರಿನ ಹದಗೆಟ್ಟ ರಸ್ತೆಗಳ ಬಗ್ಗೆ ಹಾಗೂ ಸಂಚಾರದಟ್ಟಣೆ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆದಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬೆಂಗಳೂರಿನ ನಿವಾಸಿ ಅಭಿರೂಪ್ ಎಂಬವರ ಪುತ್ರಿ ಆರ್ಯ, ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು, ನಗರದ ದೀರ್ಘಕಾಲದ ಸಂಚಾರ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾಳೆ. ಈ ಕುರಿತು ಅಭಿರೂಪ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿದ್ದಾರೆ.

ಪುಟಾಣಿಯ ಕೈಬರಹದ ಪತ್ರವು ಸಾರ್ವಜನಿಕರ ಗಮನ ಸೆಳೆದಿದ್ದು, ಆನ್‌ಲೈನ್‌ನಲ್ಲಿ ಸಹಾನುಭೂತಿಯ ಅಲೆ ಹೊಮ್ಮಿದೆ. ನರೇಂದ್ರ ಮೋದಿ ಜೀ, ಬೆಂಗಳೂರಿನಲ್ಲಿ ವಿಪರೀತ ಟ್ರಾಫಿಕ್ ಇದ್ದು ನಾವು ಶಾಲೆ ಹಾಗೂ ಕಚೇರಿಗಳಿಗೆ ತಡವಾಗಿ ತಲುಪುತ್ತಿದ್ದೇವೆ. ರಸ್ತೆ ತುಂಬಾ ಕೆಟ್ಟದಾಗಿದೆ. ದಯಮಾಡಿ ಸಹಾಯ ಮಾಡಿ’ ಎಂದು ಮೋದಿಗೆ ಬರೆದ ಪತ್ರದಲ್ಲಿ ಬಾಲಕಿ ಆರ್ಯ ಉಲ್ಲೇಖಿಸಿದ್ದಾಳೆ.


Spread the love

LEAVE A REPLY

Please enter your comment!
Please enter your name here