ಬೆಂಗಳೂರು: ವಿದ್ಯುತ್ ಕಳ್ಳತನ ಆರೋಪ ಸಂಬಂಧ ಬೆಸ್ಕಾಂ ಕುಮಾರಸ್ವಾಮಿ ಅವರಿಗೆ ದಂಡ ವಿಧಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕುಮಾರಸ್ವಾಮಿ, ಬೆಸ್ಕಾಂ ಇಲಾಖೆ ಅಧಿಕಾರಿಗಳು 68,526 ರೂಪಾಯಿ ದಂಡ ವಿಧಿಸಿದ್ದಾರೆ. ದೀಪಾವಳಿ ಸಂಧರ್ಭದಲ್ಲಿ ನಮ್ಮ ಮನೇಲಿ ಆದ ಅಚಾತುರ್ಯದ ಬಗ್ಗೆ ನಾನು ವಿಷಾದ ವ್ಯಕ್ತಪಡಿಸಿದ್ದೇನೆ.
Advertisement
ಕರೆಂಟ್ ಕಳ್ಳ ಅಂತ ನನಗೆ ಲೇಬಲ್ ಬೇರೆ ಕೊಟ್ಟಿದ್ದಾರೆ. ಸಿಎಂ ಡಿಸಿಎಂ ಸೇರಿ ಪಟಾಲಾಂ ಎಲ್ಲರೂ ಹೀಗೆ ಹೇಳುತ್ತಿದ್ದಾರೆ. ಬೆಸ್ಕಾಂ ಬಿಲ್ನಲ್ಲಿ ಅವರ ಲೆಕ್ಕಾಚಾರದಲ್ಲಿ 2.5 ಕಿಲೋ ವ್ಯಾಟ್ ಉಪಯೋಗ ಅಂತ ಇದೆ. 2526 ರೂಪಾಯಿ ಹಾಕಿದ್ದಾರೆ. ನಮ್ಮ ಮನೆಯಲ್ಲಿ ಇರುವುದು 33 ಕಿಲೋ ವ್ಯಾಟ್ ಪರ್ಮಿಷನ್ ತಗೊಂಡಿದ್ದೇನೆ. ನಾನು ನಿತ್ಯ ಉಪಯೋಗ ಮಾಡುವ ಕರೆಂಟ್ ಇದು. ಹೀಗಾಗಿ ಮಹಜರ್ ಕಾಪಿ ಕೇಳಿದ್ದೇನೆ ಎಂದರು.