ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಅಂಬೇಡ್ಕರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗದಗ ತಾಲೂಕಿನಲ್ಲಿ ಉತ್ತಮ ಸಾಧನೆ ಮಾಡಿದ ಹೊಸೂರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಉತ್ತಮ ಶಾಲಾ ಪ್ರಶಸ್ತಿಯನ್ನು ಸ್ವೀಕರಿಸಿದರು.
ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಶಿಕ್ಷಣದ ಬಗ್ಗೆ ಅಪಾರ ಕಾಳಜಿಯನ್ನು ಹೊದಿದ್ದು, ಶಾಲೆಯಲ್ಲಿ ತಮ್ಮ ಹಣದಿಂದ ಎಲ್.ಕೆ.ಜಿ. ಮತ್ತು ಯು.ಕೆ.ಜಿ ತರಗತಿಗಳನ್ನು ಪ್ರಾರಂಭಿಸಿ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ಶಾಲೆಯ ದಾಖಲಾತಿಯಲ್ಲಿ ಹೆಚ್ಚಳವಾಗಿದೆ. ಈ ಎಲ್ಲ ಅಂಶಗಳ ಆಧಾರದಲ್ಲಿ ಇಲಾಖೆ ಅಧಿಕಾರಿಗಳು ಉತ್ತಮ ಶಾಲೆ ಎಂದು ಆಯ್ಕೆ ಮಾಡಿದೆ.
ಶಾಲೆಯ ಪ್ರಗತಿಗಾಗಿ ಶ್ರಮಿಸಿದ ಶಿಕ್ಷಕರಾದ ಆರ್.ಎಂ. ಪೂಜಾರ, ಎಂ.ಜಿ. ಮಳ್ಳೂರ, ವಿ.ಡಿ. ಬಡಿಗೇರ, ಎಸ್.ಬಿ. ಭಜಂತ್ರಿ, ಲಾವಣ್ಯಾ ದೇಸಾಯಿಮಠ, ಸ್ವಪ್ನಾ ಬಂಡಿವಡ್ಡರ ಎಸ್.ಡಿ.ಎಂ.ಸಿ. ಅಧ್ಯಕ್ಷ ಶರಣಪ್ಪ ತಳವಾರ ಹಾಗೂ ಸರ್ವ ಸದಸ್ಯರು, ಮಾರ್ಗದರ್ಶಕರಾದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ವಿ. ನಡುವಿನಮನಿ, ನಿವೃತ್ತ ಉಪನಿರ್ದೇಶಕ ಎಂ.ಎ. ರಡೇರ, ಕ್ಷೇತ್ರ ಸಮನ್ವಯಾಧಿಕಾರಿ ಜೆ.ಎ. ಭಾವಿಕಟ್ಟಿ, ಸಿ.ಆರ್.ಪಿ. ಎಸ್.ಜಿ. ಚವಡಿ, ವಿ.ಎಂ. ಹಿರೇಮಠ, ಎಸ್.ಆರ್. ಬಂಡಿ, ಮಕ್ಕಳ ಪಾಲಕರು ಮತ್ತು ಪೋಷಕರು, ಗ್ರಾಮ ಪಂಚಾಯತ್ ಯಲಿಶಿರೂರ ಸರ್ವ ಸದಸ್ಯರಿಗೆ ಶಾಲೆಯ ಪರವಾಗಿ ಪ್ರಧಾನ ಗುರುಗಳು ¸ ಧನ್ಯವಾದಗಳನ್ನು ತಿಳಿಸಿದ್ದಾರೆ.