ಗದಗ:-ಮನೆ ಮುಂದೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬೆಟಗೇರಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು 10ಸಾವಿರ ರೂ.ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
ಬೆಟಗೇರಿಯ ಸೆಟ್ಲಮೆಂಟ್ ಏರಿಯಾದಲ್ಲಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸ್ಐ ಲಕ್ಷ್ಮಪ್ಪ ಆರಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ರಮೇಶ್ ರತ್ನಪ್ಪ ಕಾಳೆ ಹಾಗೂ ರತ್ನಪ್ಪ ಮೊನಪ್ಪ ಕಾಳೆ ಎಂಬುವವರು ಮನೆ ಮುಂದೆ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
10ಸಾವಿರ ಮೌಲ್ಯದ ಗಾಂಜಾ ಹಾಗೂ ನಗದು 600 ರೂಪಾಯಿಗಳನ್ನು ಜಪ್ತಿ ಮಾಡಿದ್ದಾರೆ.
ಈ ಕುರಿತು ಬೆಟಗೇರಿ ಪೊಲೀಸ್ ಠಾಣೆಯಲ್ಲಿ 0064/2024, NARCOTIC DRUGS AND PSYCHOTROPIC SUBSTANCE ACT, 1985(U/s-20(b)(ii)(A)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.



