ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇಲ್ಲಿಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಗದಗ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಮಿಷನ್ ಶಕ್ತಿ ಯೋಜನೆಯ `ಬೇಟಿ ಬಚಾವೋ ಬೇಟಿ ಪಡಾವೋ’ ಅರಿವು ಮೂಡಿಸುವ ಕಾರ್ಯಕ್ರಮವು ಸರಕಾರಿ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಜರುಗಿತು.
ಸಮಾಜದಲ್ಲಿ ಲಿಂಗ ಸಮಾನತೆ, ಹೆಣ್ಣು ಮಕ್ಕಳ ಪೋಷಣೆ, ಭ್ರೂಣ ಹತ್ಯೆ ತಡಗಟ್ಟುವಿಕೆ, ಹೆಣ್ಣು ಮಕ್ಕಳ ಸ್ಥಿತಿ-ಗತಿ ಹೆಚ್ಚಿಸಲು ಹಾಗೂ ಹೆಣ್ಣು ಮಗು ಶೈಕ್ಷಣಿಕವಾಗಿ ಸದೃಢವಾಗಲು, ಹೆಣ್ಣು ಮತ್ತು ಗಂಡು ಎಂಬ ತಾರತಮ್ಯ ನೀತಿಯನ್ನು ಹೋಗಲಾಡಿಸುವ ಕುರಿತು ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ಜಿಲ್ಲಾ ಮಹಿಳಾ ಸಬಲೀಕರಣ ಸಂಯೋಜಕರಾದ ಮಧುಶ್ರೀ, ರಾಜೇಶ್ವರಿ, ಪಿ.ಡಿ.ಒ ರಾಜಕುಮಾರ ಭಜಂತ್ರಿ, ತುಕಾರಾಮ ಹುಲಗಣ್ಣವರ, ಅಂಗನವಾಡಿ ಮೇಲ್ವಿಚಾರಕಿ ಸಾಹೀದಬೇಗಂ ಹತ್ತಿವಾಲೆ, ಮುಖ್ಯೋಪಾಧ್ಯಾಯ ಎಸ್.ಎಸ್.ಕಂಬಳಿ, ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.



