ಸೋಷಿಯಲ್ ಮೀಡಿಯಾದಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳ ಕುರಿತು ಪ್ರಚಾರ ಮಾಡುತ್ತಿದ್ದ ನಟ, ನಟಿಯರ ಮೇಲೆ ಇಡಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಸದ್ಯ ನಟ ಪ್ರಕಾಶ್ ರಾಜ್, ರಾಣಾ ದಗ್ಗುಭಾಟಿ, ವಿಜಯ್ ದೇವರಕೊಂಡ ಸೇರಿದಂತೆ ಇನ್ನೂ ಕೆಲವು ಸೆಲೆಬ್ರಿಟಿಗಳಿಗೆ ಇ.ಡಿ ಸಮನ್ಸ್ ಜಾರಿ ಮಾಡಿದೆ.
ಸೋಷಿಯಲ್ ಮೀಡಿಯಾದಲ್ಲಿ ಅಕ್ರಮ ಬೆಟ್ಟಿಂಗ್ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಮಂಚು ಲಕ್ಷ್ಮಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಕೇವಲ ಸೆಲೆಬ್ರಿಟಿಗಳಿಗೆ ಮಾತ್ರವಲ್ಲ ಟೆಕ್ ದೈತ್ಯಗಳಾದ ಗೂಗಲ್ ಮತ್ತು ಮೇಟಾ ಕಂಪನಿಗಳಿಗೂ ನೋಟಿಸ್ ಜಾರಿ ಮಾಡಿದ್ದು, ಇಡಿ ಕಚೇರಿಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಲಾಗಿದೆ.
ಇನ್ನೂ ರಾಣಾ ದಗ್ಗುಬಾಟಿ ಜು.23 ರಂದು, ಪ್ರಕಾಶ್ ರಾಜ್ ಜು.30 ರಂದು, ವಿಜಯ್ ದೇವರಕೊಂಡ ಆ.6 ರಂದು ಹಾಗೂ ಆ.13 ರಂದು ಲಕ್ಷ್ಮಿ ಮಂಚು ಅವರನ್ನು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚಿಸಿದ್ದಾರೆ.