ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಕೊಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಆದಾಗ್ಯೂ, ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಟ್ರೋಲ್ ಗಳನ್ನು ಮಾಡುತ್ತಲೆ ಇರುತ್ತಾರೆ. ಇದೀಗ ಈ ಬಗ್ಗೆ ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇನಾ ಸಮಿತಿಯಿಂದ ಸ್ಥಳೀಯ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ಸಲ್ಲಿಸಲಾಗಿದ್ದು, ಸುದೀಪ್ ಅವರನ್ನು ಟ್ರೋಲ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಟ್ವಿಟ್ಟರ್, ಇನ್ಸ್ ಸ್ಟಾಗ್ರಾಂ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾ ವೇದಿಕಗಳಲ್ಲಿ ಸುದೀಪ್ ವಿರುದ್ಧ ಅಶ್ಲೀಲ, ವೈಯಕ್ತಿಕ ಮತ್ತು ಅವಮಾನಕಾರಿ ಬರಹಗಳನ್ನು ಪ್ರಕಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇನಾ ಸಮಿತಿ ಆಗ್ರಹಿಸಲಾಗಿದೆ.
ಸಾಮಾನ್ಯವಾಗಿ, ಸೆಲೆಬ್ರಿಟಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುವ ಟ್ರೋಲ್‌ಗಳ ಬಗ್ಗೆ ಪ್ರತಿಕ್ರಿಯೆ ನೀಡದೆ ಶಾಂತವಾಗಿರುತ್ತಾರೆ. ಆದರೆ ಇತ್ತೀಚೆಗಿನ ಅವಮಾನಕಾರಿ ವಿಷಯಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಹಲವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
.ಕೇವಲ ಸುದೀಪ್ ಮಾತ್ರವಲ್ಲದೆ, ಇತ್ತೀಚೆಗೆ ನಟಿ ರಮ್ಯಾ ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಬಂದ ಅಶ್ಲೀಲ ಟೀಕೆಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಹಲವರನ್ನು ಬಂಧಿಸಿ ಖಡಕ್ ಎಚ್ಚರಿಕೆ ನೀಡಲಾಗಿತ್ತು. ಇದೀಗ ಸುದೀಪ್ ಅಭಿಮಾನಿಗಳು ಕೂಡ ಇದೇ ನಿರ್ಧಾರ ಕೈಗೊಂಡಿದ್ದಾರೆ.